ಮುಂಬೈ,ಅಕ್ಟೋಬರ್,18,2022(www.justkannada.in): ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ(ಬಿಸಿಸಿಐ) ನೂತನ ಅಧ್ಯಕ್ಷರಾಗಿ ಕರ್ನಾಟಕದ ರೋಜರ್ ಬಿನ್ನಿ ಅವರು ಆಯ್ಕೆಯಾಗಿದ್ದಾರೆ.
1983ರ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಕನ್ನಡಿಗ ರೋಜರ್ ಬಿನ್ನಿಗೆ ಬಿಸಿಸಿಐ ಅಧ್ಯಕ್ಷ ಪಟ್ಟ ಒಲಿದಿದೆ. ಇವರು ಬಿಸಿಸಿಐಯ 36ನೇ ಅಧ್ಯಕ್ಷರಾಗಿದ್ದಾರೆ. ಮುಂಬೈನಲ್ಲಿ ನಡೆದ ಬಿಸಿಸಿಐ ಎಜಿಎಂನಲ್ಲಿ ಇವರ ನೇಮಕವನ್ನು ಘೋಷಿಸಲಾಯಿತು. ಸೌರವ್ ಗಂಗೂಲಿ ಬಳಿಕ ರೋಜರ್ ಬಿನ್ನಿ ಬಿಸಿಸಿಐ ಅಧ್ಯಕ್ಷರಾಗಿದ್ದಾರೆ.
67 ವರ್ಷದ ಬಿನ್ನಿ ಅವರು ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಏಕೈಕ ಅಭ್ಯರ್ಥಿಯಾಗಿದ್ದರು. ಅಂತೆಯೆ ಜಯ್ ಶಾ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ರೋಜರ್ ಬಿನ್ನಿ ಈ ಹಿಂದೆ ಬಿಸಿಸಿಐ ಆಯ್ಕೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ರೋಜರ್ ಬಿನ್ನಿ 1979ರಿಂದ 1987ರವರೆಗೆ ಭಾರತ ಕ್ರಿಕೆಟ್ ತಂಡದ ಸದಸ್ಯರಾಗಿದ್ದರು. ಬಲಗೈ ಬ್ಯಾಟಿಂಗ್ ಶೈಲಿ ಮತ್ತು ಬಲಗೈ ಮಧ್ಯಮ ವೇಗದ ಬೌಲರ್ ಆಗಿದ್ದರು. ತವರು ಅಂಗಣ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ 1979ಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ರೋಜರ್ ಬಿನ್ನಿ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು.
Key words: Kannadiga-Roger Binny – appointed – new president – BCCI