ಮೈಸೂರು,ಜುಲೈ,2,2022(www.justkannada.in): ಇತ್ತಿಚೆಗೆ ಶಿವಮೊಗ್ಗದಲ್ಲಿ ನಡೆದ ದಕ್ಷಿಣ ಭಾರತ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮೈಸೂರಿನ ಪೊಲೀಸ್ ಪಬ್ಲಿಕ್ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಕುಶಾಲ್ ಗೌಡ ಆರ್.ಟಿ. ಬೆಳ್ಳಿ ಪದಕ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ್ದಾರೆ.
ರಾಜ್ಯ ಪೆಂಕಾಕ್ ಸಿಲಾತ್ ಸಂಸ್ಥೆ ಆಶ್ರಯದಲ್ಲಿ ನಡೆದ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕುಶಾಲ್ ಗೌಡ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾನೆ. ಈ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಆಡುವ ಅವಕಾಶ ಗಳಿಸಿದ್ದಾನೆ.
ಶಿವಮೊಗ್ಗದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಮತ್ತು ಜಿಲ್ಲಾ ಪೆಂಕಾಕ್ ಸಿಲಾತ್ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಎರಡು ದಿನಗಳ ಕಾಲ ನಡೆದ ಕರಾಟೆ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದ ತಂಡ 165 ಪಾಯಿಂಟ್ಸ್ ಪಡೆಯುವ ಮೂಲಕ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು.
ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವ ಕುಶಾಲ್ ಗೌಡ ಅವರಿಗೆ ಜಿಲ್ಲಾ ಪೆಂಕಾಕ್ ಸಿಲಾತ್ ಸಂಸ್ಥೆ ಎನ್.ಯೋಗೇಶ್, ತರಬೇತುದಾರ ಎಸ್.ನವೀನ್ ಅಭಿನಂದನೆ ಸಲ್ಲಿಸಿದ್ದಾರೆ.
ಕುಶಾಲ್ ಗೌಡ ಅವರು ಪೊಲೀಸ್ ಇಲಾಖೆಯ ಮೈಸೂರು ಜಿಲ್ಲಾ ವೈರ್ ಲೆಸ್ ನಿಯಂತ್ರಣ ಕೇಂದ್ರದಲ್ಲಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಆಗಿರುವ ಮೋಹನರಂಗ ಹಾಗೂ ಶ್ವೇತಾ ದಂಪತಿಗಳ ಪುತ್ರ ಆಗಿದ್ದಾರೆ. ಮುಂದಿನ ಡಿಸೆಂಬರ್ ತಿಂಗಳಲ್ಲಿ ಶಿವಮೊಗ್ಗದಲ್ಲಿಯೇ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ ನಡೆಯಲಿದೆ.
Key words: karate-Kushal Gowda – Mysore- selected -national level.