ಬೇಸಿಗೆಯಲ್ಲಿ ‘ POWER CUT ‘ ಇಲ್ಲ,  ಸಮರ್ಪಕ ಪೂರೈಕೆಗೆ ಸಜ್ಜು: ಇಂಧನ ಸಚಿವ ಜಾರ್ಜ್‌.

Karnataka, adequate power supply, summer , Energy Minister K.J George

ಬೆಂಗಳೂರು, 23 ಮಾರ್ಚ್‌ 2024:  ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್‌ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಇಂಧನ ಸಚಿವ ಜಾರ್ಜ್‌ ಹೇಳಿರುವುದು ಇಷ್ಟು..

“ಸದ್ಯ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು,”

“ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚುವುದು ನಿರೀಕ್ಷಿತ. ಅದಕ್ಕಾಗಿಯೇ ಬಹಳ ಮುಂಚಿತವಾಗಿ ಸರಿಯಾದ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದ ಯಾವುದೇ ವರ್ಗದ ಗ್ರಾಹಕರಿಗೆ ಲೋಡ್‌ ಶೆಡ್ಡಿಂಗ್‌ ಬಿಸಿ ತಟ್ಟದಂತೆ ಇಲಾಖೆ ಎಚ್ಚರವಹಿಸಿದೆ,”

 

“ರಾಜ್ಯದಲ್ಲಿ ಪ್ರತಿ ದಿನದ ವಿದ್ಯುತ್ ಬಳಕೆ 329 ಮಿಲಿಯನ್ ಯೂನಿಟ್‌ನಷ್ಟಿದ್ದು – ಹಿಂದಿನ ವರ್ಷ ಇದೇ ಅವಧಿಯ ವಿದ್ಯುತ್‌  ಬಳಕೆ ಪ್ರಮಾಣ 300 ಮಿ.ಯೂ. ನಷ್ಟಿತ್ತು. ಕಳೆದ ವರ್ಷದ ಗರಿಷ್ಠ ಲೋಡ್ 15300+ ಮೆ.ವ್ಯಾ.ಆಗಿದ್ದರೆ, ಈ ವರ್ಷದ ಗರಿಷ್ಠ ಲೋಡ್ 17000+ ಮೆ.ವ್ಯಾ.ಗೆ ಏರಿದೆ,”

“ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಓದಲು ತೊಂದರೆಯಾಗದಂತೆ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ಈಗಾಗಲೇ ಕೃಷಿ ಪಂಪ್‌ಸೆಟ್‌ಗಳಿಗೆ 7 ತಾಸು ವಿದ್ಯುತ್‌ ಪೂರೈಕೆಗೆ ಆದೇಶ ನೀಡಲಾಗಿದೆ. ಬೇಸಿಗೆ ಕಾರಣದಿಂದ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಲಾಗುವುದು,”ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

key words :  Karnataka, adequate power supply, summer , Energy Minister K.J George

 

English summary :

Karnataka taking steps to ensure adequate power supply during peak summer demand- Energy Minister K.J George

Energy Minister K J George said that Karnataka has taken adequate steps, chalked out all remedial measures, and is fully geared to meet the State’s energy requirements during the upcoming summer months