ಬೆಂಗಳೂರು,ಫೆಬ್ರವರಿ,28,2025 (www.justkannada.in): ಕನ್ನಡ ಮಾತಾಡಿ ಎಂದಿದ್ದಕ್ಕೆ ಕೆಎಸ್ಆರ್ಟಿಸಿ ಬಸ್ ಮಾಲೀಕನ ಮೇಲಿನ ಹಲ್ಲೆ ಖಂಡಿಸಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಮಾರ್ಚ್ 22ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಮಾಡಲಾಗುತ್ತದೆ. ಮಾರ್ಚ್ 3ರಂದು ಕನ್ನಡ ಒಕ್ಕೂಟದಿಂದ ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದರು.
ಮಾರ್ಚ್ 7 ರಂದು ಬೆಳಗಾವಿ ಚಲೋಗೆ ಕನ್ನಡಿಗರು ನಿರ್ಧರಿಸಲಾಗಿದೆ. ಮಾರ್ಚ್ 11 ರಂದು ಅತ್ತಿಬೆಲೆ ಗಡಿ ಬಂದ್, ಅಲ್ಲದೆ ಮಾರ್ಚ್ 16ರಂದು ಹೊಸಕೋಟೆ ಟೋಲ್ ಬಂದ್ ಮಾಡಲಾಗುತ್ತದೆ. ಮೇಕೆದಾಟು ಯೋಜನೆ ಜಾರಿಗಾಗಿ ಬಂದ್ ಗೆ ಕರೆ ನೀಡಲಾಗಿದೆ. ಇನ್ನು ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ನಡೆಸುವುದಾಗಿ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಮರಾಠಿಗರ ಪುಂಡಾಟಿಕೆ ಹೆಚ್ಚಾಗಿದ್ದು, ಕರ್ನಾಟಕದ ಬಸ್ ಗಳಿಗೆ ಮಸಿ ಕೂಡ ಬಳಿಯಲಾಗಿದೆ. ಈ ಎಲ್ಲವನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದಾವೆ.
Key words: Call, Karnataka Bandh, March 22, Vatal Nagaraj