ವಿಶ್ವವಿದ್ಯಾಲಯ ಮತ್ತು ಕಾಲೇಜು ಸಮಗ್ರ ನಿರ್ವಹಣಾ ವ್ಯವಸ್ಥೆ, ಇ-ಆಡಳಿತ ಮೂಲಕ ಅನುಷ್ಠಾನ : ಡಿಸಿಎಮ್

 

ಬೆಂಗಳೂರು, ಮೇ 26, 2020 : (www.justkannada.in news) ಹನ್ನೊಂದು ಕೋಟಿ ರೂ. ಗಳ ವೆಚ್ಚದಲ್ಲಿ ವಿಶ್ವವಿದ್ಯಾಲಯ ಮತ್ತು ಕಾಲೇಜು ಸಮಗ್ರ ನಿರ್ವಹಣಾ ವ್ಯವಸ್ಥೆಯನ್ನು ಇ-ಆಡಳಿತ ಇಲಾಖೆಯ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ: ಸಿ.ಎನ್.ಅಶ್ವಥ್ ನಾರಾಯಣ್ ತಿಳಿಸಿದರು.

ಯುಜಿಸಿ ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದ್ದು, ಪ್ರಸ್ತುತ ಶೈಕ್ಷಣಿಕ ವರ್ಷದ ಕಾರ್ಯಕ್ರಮಗಳನ್ನು ಜೂನ್ 15ರೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ. ಈ ಬಾರಿ ಬೇಸಿಗೆ ರಜೆಯನ್ನು ಮೊಟಕುಗೊಳಿಸಲಾಗುವುದು ಎಂದರು.

ರಾಜ್ಯದ 13 ವಿಧಾನಸಭಾ ಕ್ಷೇತ್ರಗಳಲ್ಲಿ ಸರ್ಕಾರಿ ಕಾಲೇಜುಗಳು ಇಲ್ಲದೇ ಇರುವುದನ್ನು ಗುರುತಿಸಿದ್ದು, ಹೆಚ್ಚುವರಿ ಕಾಲೇಜುಗಳು ಇರುವ ಕ್ಷೇತ್ರಗಳಿಂದ 6 ಪ್ರಥಮ ದರ್ಜೆ ಕಾಲೇಜುಗಳನ್ನ ಈ ಭಾಗಗಳಿಗೆ ಸ್ಥಳಾಂತರ ಮಾಡಲಾಗುವುದು ಎಂದರು.

karnataka-bangalore-university-cdc-e-governance-dcm

ಬೆಂಗಳೂರಿನ ಬಾಬಾ ಸಾಹೇಬ್ ಸ್ಕೂಲ್ ಆಫ್ ಎಕಾಮಿಕ್ಸ್ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆ ಲಾಕ್ ಡೌನ್ ನಂತರದ ದಿನಗಳಲ್ಲಿ ಪ್ರಧಾನ ಮಂತ್ರಿಗಳನ್ನು ಆಹ್ವಾನಿಸಲು ಉದ್ದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳು ತಿಳಿಸಿದರು.
ಯುವ ಸಬಲೀಕರಣ ಕೇಂದ್ರಗಳನ್ನು ರಚಿಸಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಪೋರ್ಟಲ್‍ಮೂಲಕ ಒಂದೇ ಸೂರಿನಡಿ ಸಮಗ್ರ ಮಾಹಿತಿಯನ್ನು ಒದಗಿಸಲಾಗುವುದು. ಈ ಕೇಂದ್ರಕ್ಕೆ ಪ್ರೌಢಶಾಲಾ ಮಟ್ಟದಿಂದಲೇ ವಿದ್ಯಾರ್ಥಿಗಳ ನೊಂದಣಿಯನ್ನು ಪ್ರಾರಂಭಿಸಲಾಗುವುದು. ಶಾಲೆ/ ಕಾಲೇಜಿನಿಂದ ಹೊರಗುಳಿಯುವ ವಿದ್ಯಾರ್ಥಿಗಳನ್ನು ಈ ಮೂಲಕ ಪತ್ತೆ ಹಚ್ಚಸಲು ಸಾಧ್ಯವಾಗಲಿದೆ.

ಕೈಗಾರಿಕೆಗಳನ್ನು ಇದರೊಂದಿಗೆ ಸಂಪರ್ಕಿಸಿ ವಿದ್ಯಾರ್ಥಿಗಳಿಗೆ ಇಂರ್ಟನ್‍ಶಿಪ್ ಹಾಗೂ ಉದ್ಯೋಗ ದೊರಕಿಸುವ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.

 

key words : karnataka-bangalore-university-cdc-e-governance-dcm