ಬೆಂಗಳೂರು, ನವೆಂಬರ್,19,2020(www.justkannada.in): ಬಂಡವಾಳ ಹೂಡಿಕೆಗೆ ಕರ್ನಾಟಕ ಅತ್ಯಂತ ಸೂಕ್ತ ಸ್ಥಳವಾದ್ದದ್ದು. ಉದ್ಯಮಿಗಳನ್ನ ಸೆಳೆಯುವಲ್ಲಿ ರಾಜ್ಯ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.
ಬೆಂಗಳೂರು ಟೆಕ್ ಸಮ್ಮಿಟ್ 2020ಕ್ಕೆ ಚಾಲನೆ ಸಿಕ್ಕ ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕರ್ನಾಟಕಕ್ಕೆ ಈ ಟೆಕ್ ಸಮ್ಮಿಟ್ ಐತಿಹಾಸಿಕ ಅವಕಾಶವಾಗಿದೆ. 25 ದೇಶಗಳು ಈ ಟೆಕ್ ಸಮ್ಮಿಟ್ ನಲ್ಲಿ ಭಾಗವಹಿಸಿವೆ. ಬಂಡವಾಳ ಹೂಡಿಕೆಗೆ ಕರ್ನಾಟಕ ಅತ್ಯಂತ ಸೂಕ್ತ ಸ್ಥಳವಾದ್ದದ್ದು. ಉದ್ಯಮಿಗಳನ್ನ ಸೆಳೆಯುವಲ್ಲಿ ರಾಜ್ಯ ಯಶಸ್ವಿಯಾಗಿದೆ. ನೂತನ ಐಟಿ ನೀತಿ ಜಾರಿಯಿಂದ ಮುಂದಿನ 5 ವರ್ಷದಲ್ಲಿ 60 ಲಕ್ಷ ಉದ್ಯೋಗ ಸೃಷ್ಠಿಯಾಗಲಿದೆ ಎಂದು ಹೇಳಿದರು.
2025ರ ವೇಳೆಗೆ ಭಾರತದ ಆರ್ಥಿಕತೆಯನ್ನು 5 ಟ್ರಿಲಿಯನ್ ಡಾಲರ್ ನಷ್ಟು ಮಾಡಲು ಮತ್ತು ಜಾಗತಿಕ ಮಟ್ಟದಲ್ಲಿ ಆರ್ಥಿಕ ಬಲಿಷ್ಠ ದೇಶವನ್ನಾಗಿ ಪರಿವರ್ತಿಸಲು ಪ್ರಧಾನಿ ಮೋದಿ ತೀವ್ರ ಉತ್ಸುಕವಾಗಿದ್ದಾರೆ. ಭಾರತ ಸರ್ಕಾರದ ಈ ದೃಷ್ಟಿಕೋನದಲ್ಲಿ ಸಾಗಲು ಕರ್ನಾಟಕ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
Key words: Karnataka – best place – invest- CM BS Yeddyurappa- Bangalore Tech Summit 2020