CET Date extended : ದಾಖಲಾತಿಗಳ ಪರಿಶೀಲನೆಗೆ ಮತ್ತಷ್ಟು ಅವಕಾಶ

Karnataka Examination Authority - provided -  opportunity-  submit- online application for- UGCET 2022.

 

ಬೆಂಗಳೂರು, ಸೆ.01, 2022: (www.justkannada.in news)ರಾಜ್ಯಾದ್ಯಂತ ವಿಪರೀತ ಮಳೆಯಿಂದ ವಿದ್ಯುತ್ ಪೂರೈಕೆ ಅಸ್ತವ್ಯಸ್ತವಗೊಂಡಿರುವ ಹಿನ್ನೆಲೆಯಲ್ಲಿ, ಸಿಇಟಿ ಬರೆದಿರುವ ಅಭ್ಯರ್ಥಿಗಳಿಗೆ ಕೆಲವು ಆನ್ ಲೈನ್ ದಾಖಲಾತಿಗಳನ್ನು ಸರಿಯಾಗಿ ನಮೂದಿಸಲು ಮತ್ತಷ್ಟು ಕಾಲಾವಕಾಶ ಕೊಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಈ ಬಗ್ಗೆ ಗುರುವಾರ ಮಾಹಿತಿ ನೀಡಿರುವ ಅವರು, ಹಲವು ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಈ ಕಾಲಾವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದಿದ್ದಾರೆ.

ಇದರಂತೆ ಶಾಲಾ ವ್ಯಾಸಂಗದ ವಿವರಗಳನ್ನು ಮೊದಲು ಅಪೂರ್ಣವಾಗಿ ತುಂಬಿರುವವರು ಸರಿಯಾದ ವಿವರಗಳನ್ನು ತುಂಬಲು ಸೆ.1ರಿಂದ 7ರವರೆಗೆ ಪ್ರತಿದಿನ ರಾತ್ರಿ 10ರಿಂದ ಮರುದಿನ ಬೆಳಿಗ್ಗೆ 8ರವರೆಗೆ (ಭಾನುವಾರ ಪೂರ್ತಿ ದಿನ) ಅವಕಾಶ ಇರಲಿದೆ. ಇದು ಈವರೆಗೂ ಶಾಲಾ ದಾಖಲಾತಿ ಪರಿಶೀಲನೆ ಆಗದಿರುವ ಅಭ್ಯರ್ಥಿಗಳಿಗೆ ಮಾತ್ರ ಅನ್ವಯ ಆಗಲಿದೆ.

ಹಾಗೆಯೇ, ಶಾಲಾ ವಿವರಗಳು ಮತ್ತು ಜಿಲ್ಲಾ/ತಾಲ್ಲೂಕು ವಿವರಗಳನ್ನು ತುಂಬದೆ ಇದ್ದಲ್ಲಿ ಅಂಥವರಿಗೆ ಇದಕ್ಕೆ ಆಯಾ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಇದನ್ನು ಸರಿಪಡಿಸಿಕೊಳ್ಳಲು ಸೆ.7ರವರೆಗೆ ಅವಕಾಶ ಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಒಂದೆರಡು ವರ್ಷಗಳ ಶಾಲಾ ವಿವರಗಳನ್ನು ತಪ್ಪಾಗಿ ನಮೂದಿಸಿರುವವರಿಗೆ ಸೆ.8ರ ಬಳಿಕ ಅವಕಾಶ ಕೊಡಲಾಗುವುದು. ಜತೆಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್.ಡಿ. ಸಂಖ್ಯೆಯನ್ನು ತಪ್ಪಾಗಿ ನಮೂದಿಸಿದ್ದರೆ ಅಂಥವರು ಸೆ.3ರ ಬೆಳಿಗ್ಗೆ 8ರಿಂದ ಸೆ.5ರ ಸಂಜೆ 5 ಗಂಟೆಯ ಒಳಗೆ ಅದನ್ನು ಸರಿಪಡಿಸಿ ಕೊಳ್ಳಬಹುದು ಎಂದು ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

KEY WORDS :  Karnataka Examination Authority – provided –  opportunity-  submit- online application for- UGCET 2022.

ENGLISH SUMMARY : 

Bengaluru: Karnataka Examination Authority (KEA) has provided an opportunity for candidates those who have submitted online application for UGCET 2022.
Dr. C.N. Ashwath Narayan, Minister for Higher Education, has said, considering the power shutdown due to excessive rain across the State the decision has been taken.

If there is any mistake in the earlier filled application with regard to details of School studies or incomplete information (if the address of the School or College is entered wrongly candidates can correct it from 01-09-22 to 07-09-22 on any day in between 10:00 p.m. to next morning 8 a.m. on Sunday the correction can be applied 24/7. This will be applicable to those candidates whose School records have not been examined till now.

If details of the School is not completely filled/left blank and information of Taluk and District is not mentioned, the candidates can apply correction between 01-09-22 and 07-09-22. This should be done during examination of records at the respective BEO offices. This is also applicable to those candidates whose records have not been examined so far.

If the details of one or two years of School education is wrongly entered, an opportunity will be given to incorporate the corrections after 08-09-22. This is applicable to candidates whose educational records have already been examined and found lacking in
rural/Kannada/ 7 years completion.

To apply corrections for RD number of caste and Income Certificate, opportunity will be given between 03-09- 22 (8:00 a.m.) 05-09-22 (5 pm). This will be applicable to candidates whose RD number of caste/ income/371j Certificate have been rejected during online examination.