ಬೆಂಗಳೂರು, ಜೂನ್,5,2024 (www.justkannnada.in): ಉತ್ತರಾಖಂಡ್ ನ ಸಹಸ್ರತಾಲ್ ಗೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರು ಮೃತಪಟ್ಟ ಘಟನೆ ನಡೆದಿದೆ.
ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಚಾರಣಿಗರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ನಾಲ್ವರು ಗೈಡ್ಗಳು ಸೇರಿ 19 ಚಾರಣಿಗರು ಚಾರಣಕ್ಕೆ ತೆರಳಿದ್ದಾಗ ದುರಂತ ಸಂಭವಿಸಿದೆ. ಆದರೆ ದುರಂತದಲ್ಲಿ ಮೃತಪಟ್ಟವರ ಗುರುತು ಇನ್ನು ತಿಳಿದುಬಂದಿಲ್ಲ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ಕಂದಾಯ ಸಚಿವ ಕೃಷ್ಣ ಭೈರೇಗೌಡ ಬೆಂಗಳೂರಿನಿಂದ ಡೆಹ್ರಾಡೂನ್ಗೆ ತೆರಳಿದ್ದಾರೆ.
ಸಂಕಷ್ಟಕ್ಕೆ ಸಿಲುಕಿದವರ ರಕ್ಷಣೆಗೆ ರಾಜ್ಯಸರ್ಕಾರ ಧಾವಿಸಿದ್ದು, ಸಚಿವ ಕೃಷ್ಣಭೈರೇಗೌಡ ಉತ್ತರಾಖಂಡ್ ಗೆ ತೆರಳಿ ಪರಿಹಾರ ಕಾರ್ಯಾಚರಣೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದಾರೆ. ಉತ್ತರಾಖಂಡ್ ಸರ್ಕಾರದ ಜೊತೆ ಮಾತಾಡಿರುವ ಬಗ್ಗೆಯೂ ಮಾಹಿತಿ ನೀಡಿದ್ದು, ಖುದ್ದು ತೆರಳಿ ಕಾರ್ಯಾಚರಣೆ ನೋಡಿಕೊಳ್ಳಲು ಸಿಎಂ ಸೂಚನೆ ಮೇರೆಗೆ ಡೆಹ್ರಾಡೂನ್ಗೆ ತೆರಳಿದ್ದಾರೆ.
Key words: Karnataka, Four people, death, Uttarakhand