ಬೆಂಗಳೂರು,ಫೆಬ್ರವರಿ,7,2025 (www.justkannada.in): ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಹಭಾಗಿತ್ವ ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯಗಳು ಮಹತ್ವದ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಿದವು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರಿ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಒಡಂಬಡಿಕೆ ಏರ್ಪಟ್ಟಿತು.
ಬ್ರಿಟಿಷ್ ಡೆಪ್ಯುಟಿ ಹೈಕಮಿಷನ್ ನ ಬ್ರಿಟಿಷ್ ಕೌನ್ಸಿಲ್ ವಿಭಾಗದ ನಿರ್ದೇಶಕ ಜನಕ ಪುಷ್ಪನಾಥನ್, ಮಿಷನ್ ನ ಉಪ ಮುಖ್ಯಸ್ಥ ಜೇಮ್ಸ್ ಗೋಡ್ಬರ್, ಲಿವರ್ ಪೂಲ್ ವಿ.ವಿ.ಯ ಕುಲಪತಿ ಪ್ರೊ.ಟಿಮ್ ಜೋನ್ಸ್, ಮತ್ತು ಸಮ-ಕುಲಪತಿ ಪ್ರೊ.ತಾರಿಕ್ ಅಲಿ ಅವರು ಅಂಕಿತಕ್ಕೆ ಸಹಿ ಹಾಕಿದರು.
ಆವಿಷ್ಕಾರ ಕಾರ್ಯಕ್ರಮಗಳು ಹಾಗೂ ಶಿಕ್ಷಣ ಸಹಕಾರಕ್ಕೆ ಸಂಬಂಧಿಸಿದ ಸಹಭಾಗಿತ್ವವನ್ನು ಸದೃಢಗೊಳಿಸುವ ಜೊತೆಗೆ, ಅದನ್ನು ಉನ್ನತ ಸ್ತರಕ್ಕೆ ಕೊಂಡೊಯ್ಯಲು ಜಂಟಿ ಕಾರ್ಯತಂಡ ರಚಿಸುವ ಗುರಿಯನ್ನು ಕೂಡ ಒಡಂಬಡಿಕೆ ಹೊಂದಿದೆ.
ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಉನ್ನತ ಶಿಕ್ಷಣ ಪರಿಷತ್ ನ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಕೆ.ಜಿ.ಚಂದ್ರಶೇಖರ ಸೇರಿದಂತೆ ಇತರರು ಇದ್ದರು.
ENGLISH SUMMARY
Karnataka Government, University of Liverpool Ink MoU for Enhanced Collaboration
Bengaluru: In a significant move to foster greater cooperation in education and research, the Government of Karnataka and the University of Liverpool signed a Memorandum of Understanding (MoU) at the Chief Minister’s official residence, Cauvery, on Friday.
Chief Minister Siddaramaiah, Large and Medium Industries Minister MB Patil, and Higher Education Minister Dr MC Sudhakar were present at the signing ceremony, along with Prof Tim Jones, Vice-Chancellor, and Prof Tariq Ali, Pro-Vice-Chancellor, University of Liverpool.
The MoU was signed by Janaka Pushpanathan, Director, British Council Division, James Godber, Deputy Head of Mission, British Deputy High Commission, Prof Tim Jones, Vice-Chancellor,and Prof Tariq Ali, Pro-Vice-Chancellor, University of Liverpool.
The MoU aims to strengthen collaboration in research and innovation activities, education cooperation, and establish a joint working group to take the partnership forward.
LK Atheeq, Additinal chief secretary to CM, Dr. S. Selvakumar, IAS – Principal Secretary to Government, Department of Commerce and Industries, and Smt. Gunjan Krishna, IAS – Commissioner for Industrial Development, Department of Industries and Commerce, Dr KG Chandrasekhar, executive director, Karnataka higher education council and others were present.
Key words: Karnataka Government, University of Liverpool, Signing, agreement