ಬೆಳಗಾವಿ,ಡಿಸೆಂಬರ್,6,2022(www.justkannada.in): ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಮತ್ತೆ ಶೀವಸೇನೆ ಪುಂಡಾಟ ಮೆರೆದಿದ್ದಾರೆ.
ಪುಣೆಯಲ್ಲಿ ಕರ್ನಾಟಕದ ಸರ್ಕಾರಿ ಬಸ್ ಗಳಿಗೆ ಉದ್ದವ್ ಠಾಕ್ರೆ ಬಣದ ಶಿವಸೇನೆ ಕಾರ್ಯಕರ್ತರು ಮಸಿ ಬಳಿದು ಪುಂಡಾಟ ಮೆರೆದಿದ್ದಾರೆ. ಈ ಮಧ್ಯೆ ಬೆಳಗಾವಿಗೆ ತೆರಳದ ಹಿನ್ನೆಲೆ ಮಹಾರಾಷ್ಟ್ರ ಸಚಿವರ ವಿರುದ್ಧವೇ ಶೀವಸೇನೆ ಆಕ್ರೋಶ ವ್ಯಕ್ತಪಡಿಸಿದೆ. ಸಚಿವರಾದ ಚಂಧ್ರಕಾಂತ್ ಪಾಟೀಲ್, ದೇಸಾಯಿ ವಿರುದ್ಧ ಘೋಷಣೆ ಕೂಗಿ ಶಿವಸೇನೆ ಕಾರ್ಯಕರ್ತರು ಕಿಡಿಕಾರಿದ್ದಾರೆ.
ಅಲ್ಲದೆ ಬೆಳಗಾವಿ ಗಡಿಯೊಳಗೆ ನುಗ್ಗಲು ಶಿವಸೇನೆ ಕಾರ್ಯಕರ್ತರು ಯತ್ನಿಸಿದ್ದು 30ಕ್ಕೂ ಹೆಚ್ಚು ಶಿವಸೇನೆ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇನ್ನೊಂದೆಡೆ ಬೆಳಗಾವಿ ಪ್ರವೇಶಕ್ಕೆ ಅನುಮತಿ ನೀಡುವಂತೆ ನಿಷೇಧಾಜ್ಞೆ ತೆರವುಗೊಳಿಸುವಂತೆ ಮನವಿ ಮಾಡಲು ಎಂಇಎಸ್ ಕಾರ್ಯಕರ್ತರು ಬೆಳಗಾವಿ ಡಿಸಿ ಕಚೇರಿಗೆ ಆಗಮಿಸಿದ್ದರು. ಆದರೆ ಎಂಇಎಸ್ ಮನವಿ ನಿರಾಕರಿಸಿದ್ದು ಈ ವೇಳೆ ಎಂಇಎಸ್ ಪುಂಡರು ನಾಡದ್ರೋಹಿ ಘೋಷಣೆ ಕೂಗಿದ್ದಾರೆ. ಬೆಳಗಾವಿ ಡಿಸಿ ಕಚೇರಿ ಮುಂದೆ ಬೆಳಗಾವಿ ಕಾರವಾರ ನಿಪ್ಪಾಣಿ ಬೀದರ್ ಬಾಲ್ಕಿ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗಿದ್ದು ಈ ವೇಳೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.
Key words: Karnataka-Maharashtra –border- Shiv Sena- MES –arrest