JOB NEWS : 203 ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ.

 

ಬೆಂಗಳೂರು, ಜು.27, 2019 : (www.justkannada.in news) ಕರ್ನಾಟಕ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಪುರುಷರು, ಮಹಿಳೆಯರು ಹಾಗೂ ಸೇವೆಯಲ್ಲಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌(ಸಿವಿಲ್‌) ಮತ್ತು ಸಶಸ್ತ್ರ ಮೀಸಲು ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಸಿಎಆರ್‌/ಡಿಎಆರ್‌) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿರುವುದು.

ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಸಿವಿಲ್‌) ಹುದ್ದೆಗೆ ಪುರುಷರು 138, ಮಹಿಳೆಯರು 41 ಹಾಗೂ ಸೇವೆಯಲ್ಲಿರುವವರು 21, ಸಶಸ್ತ್ರ ಮೀಸಲು ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗೆ ಪುರುಷರು 37, ಸೇವೆಯಲ್ಲಿರುವವರು 3 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.

ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವವರು ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವುದು ಕಡ್ಡಾಯ. ಜತೆಗೆ ಅರ್ಜಿದಾರರ ವಯಸ್ಸು , 5 ಆಗಸ್ಟ್‌ 2019ಕ್ಕೆ ಅನ್ವಯವಾಗುವಂತೆ ಕನಿಷ್ಠ 21 ವರ್ಷಗಳಿರಬೇಕು . ಜತೆಗೆ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಸಿವಿಲ್‌) ಹುದ್ದೆಗೆ 28 ವರ್ಷ. ಪರಿಶಿಷ್ಟ ಜಾತಿ ಮತ್ತು ಪಂಗಡದ ಹಾಗೂ ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ 30 ವರ್ಷ. ಮೀಸಲು ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ 26 ವರ್ಷ ವಯೋಮಿತಿಯಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ 28 ವರ್ಷ ವಯೋಮಿತಿ ನಿಗದಿ ಪಡಿಸಲಾಗಿದೆ. ಸೇವಾ ನಿರತ ಅಭ್ಯರ್ಥಿಗಳಿಗೆ 35 ವರ್ಷ. ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ನಿಗಧಿ ಪಡಿಸಲಾಗಿದೆ.

ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಪ್ರವರ್ಗ–1 ಅಭ್ಯರ್ಥಿಗಳಿಗೆ 100 ರೂ. ಇತರೆ ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. 7 ಆಗಸ್ಟ್‌ 2019ರಂದು ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ. ಅಧಿಕೃತ ಬ್ಯಾಂಕ್‌ ಖಾತೆ ಅಥವಾ ಅಂಚೆ ಕಛೇರಿಯಲ್ಲಿ ಶುಲ್ಕ ಪಾವತಿಸಬೇಕು.

ಹೆಚ್ಚಿನ ಮಾಹಿತಿಗೆ www.ksp.gov.in ವೆಬ್‌ಸೈಟ್‌ಗೆ ಭೇಟಿಕೊಡಿ.

KEY WORDS : karnataka-state-police-sub-inspector-jobs-applications-invited

ENGLISH SUMMARY : 

Karnataka Police SI recruitment 2019: Application invited for 203 vacancies, last date August 5. Karnataka State Police (KSP) has released notification for the recruitment of Police Sub Inspector (Civil) & Armed Reserve Sub-Inspector of Police (CAR/ DAR) vacancies.