ಬೆಂಗಳೂರು, ಮೇ 10, 2023 (www.justkannada.in): ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರು ಎಲ್ಲರೂ ತಪ್ಪದೇ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕರ್ನಾಟಕದ ಜನರು, ವಿಶೇಷವಾಗಿ ಯುವ ಮತ್ತು ಮೊದಲ ಬಾರಿಗೆ ಮತ ಚಲಾಯಿಸುವವರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಎಂದು ಮನವಿ ಮಾಡಿದ್ದಾರೆ.
ಬಹುನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದೆ.
ರಾಜ್ಯದಲ್ಲಿ ಒಟ್ಟು 5, 31,33,054 ಕೋಟಿ ಮತದಾರರಿದ್ದಾರೆ. ಈ ಪೈಕಿ 2,67,28,053 ಕೋಟಿ ಪುರುಷ ಹಾಗೂ 2,64,00,074 ಕೋಟಿ ಮಹಿಳಾ ಮತದಾರರಿದ್ದಾರೆ. ಜೊತೆಗೆ 11, 71,558 ಯುವ ಮತದಾರರು ಇದ್ದಾರೆ.