ಬೆಂಗಳೂರು, ಸೆಪ್ಟೆಂಬರ್ 05, 2021 (www.justkannada.in): ದೇಶದ ಯಾವುದೇ ಯೋಜನೆಯಾಗಲೀ ಅದರ ರುವಾರಿ ಕರ್ನಾಟಕ ಎಂದರೆ ಅದು ಕರ್ನಾಟಕ. ಕಿಸಾನ್ ಬಜೆಟ್ ಮಂಡಿಸಿದ ಮೊದಲ ಹೆಗ್ಗಳಿಕೆ ಮಾಜಿ ಸಿಎಂ ಯಡಿಯೂರಪ್ಪ ಅವರದ್ದಾಗಿದೆ ಎಂದು ಕೇಂದ್ರ ಕೃಷಿ ಕಲ್ಯಾಣ ರೈತ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಶ್ಲಾಘಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕೃಷಿ ಇಲಾಖೆ ಸಹಯೋಗದಲ್ಲಿ ಕರ್ನಾಟಕ ಸರ್ಕಾರದಿಂದ ಹಮ್ಮಿಕೊಂಡಿದ್ದ ರೈತ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಲೋಕಾರ್ಪಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ರೈತರ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಪ್ರತಿವರ್ಷ ಸಹಾಯಧನ ವಿದ್ಯಾರ್ಥಿವೇತನ ನೀಡುವ ದೇಶದ ಮೊದಲ ಯೋಜನೆ ವಿದ್ಯಾನಿಧಿ ಯೋಜನೆ.ಶೇ.75ರಷ್ಟು ಜನ ಮಳೆಯಾಧಾರಿತ ಕೃಷಿ ಮಾಡುತ್ತಿದ್ದು ಕಿಸಾನ್ ಸಮ್ಮಾನ್ ಯೋಜನೆ, ಸಾವಯವ ಹನಿನೀರಾವರಿ ಸೇರಿದಂತೆ ಸಣ್ಣ ರೈತನ ಕಲ್ಯಾಣಕ್ಕಾಗಿ ಬಾಡಿಗೆಗೆ ಕೃಷಿ ಯಂತ್ರೋಪಕರಣ ,ಆಹಾರ ಉತ್ಪನ್ನ ಆಹಾರ ಮಾರುಕಟ್ಟೆ ಸೇರಿದಂತೆ ಕೃಷಿ ಉತ್ಪಾದಕರ ಸಂಘದ ಮೂಲಕ ದೇಶದ ಸಣ್ಣ ರೈತ ಲಾಭದಾಯಕನಾಗಲು ಕೃಷಿ ಉದ್ಯಮಿಯಾಗುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ ಎಂದರು.
ತೋಟಗಾರಿಕೆ ಇಲಾಖೆಯೂ ಕೂಡ ಕೃಷಿಯಂತೆ ಕೃಷಿ ವಿಶ್ವವಿದ್ಯಾಲಯವಾಗಬೇಕು.ಕಟ್ಟಕಡೆಯ ರೈತನನ್ನು ಕೂಡ ಯೋಜನೆಗಳು ತಲುಪಬೇಕು. ಕಾರ್ಯಕ್ರಮದಲ್ಲಿ ಕೇಂದ್ರದ ಸಚಿವರಾದ ನರೇಂದ್ರ ಸಿಂಗ್ ತೋಮರ್, ಸಚಿವರಾದ ಬಿ.ಸಿ.ಪಾಟೀಲ್,ಮುನಿರತ್ನ, ಬಿ.ಸಿ ನಾಗೇಶ್ ಸೇರಿದಂತೆ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
key words: Karnataka role model for all agricultural projects says Shobha Karandlaje