ವಿಧಾನಸಭೆ, ಪರಿಷತ್ ನಲ್ಲಿ ‘NEET ವಿರುದ್ಧ ನಿರ್ಣಯ ಅಂಗೀಕಾರ

ಬೆಂಗಳೂರು, ಜುಲೈ, 25,2024 (www.justkannada.in):  ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸುವ ನೀಟ್ (NEET) ಅನ್ನು ರದ್ದುಪಡಿಸಿ ಸಿಇಟಿಯನ್ನೇ ಮುಂದುವರೆಸುವ ಮಹತ್ವದ ನಿರ್ಣಯವನ್ನು ವಿಧಾಮಂಡಲದ ಉಭಯ ಸದನಗಳಲ್ಲಿ ಮಂಡಿಸಿ ಅಂಗೀಕರಿಸಲಾಗಿದೆ.

ಮುಡಾ ಹಗರಣ ಚರ್ಚೆಗೆ ಆಗ್ರಹಿಸಿ ಬಿಜೆಪಿ ಜೆಡಿಎಸ್   ಪ್ರತಿಭಟನೆ ನಡೆಸಿತು. ಈ  ಗದ್ದಲದ ನಡುವೆಯೇ ಕೆಲವು ವಿಧೇಯಕಗಳನ್ನ ಅಂಗೀಕಾರ ಮಾಡಲಾಯಿತು. ನೀಟ್ ಪರೀಕ್ಷೆ (Neet Exam) ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿ ಅಂಗೀಕರಿಸಲಾಯಿತು. ಸಿಇಟಿ ಅಂಕಗಳನ್ನು ಆಧರಿಸಿ ಪ್ರವೇಶಾತಿ ನೀಡಬೇಕೆಂದು ಒತ್ತಾಯಿಸಲಾಗಿದೆ.

ಪ್ರತಿಪಕ್ಷಗಳ ಸದಸ್ಯರ ವಿರೋಧ ನಡುವೆಯೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ವಿಧಾನಸಭೆಯಲ್ಲಿ ಹಾಗೂ ವಿಧಾನಪರಿಷತ್ ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನೀಟ್ ಪರೀಕ್ಷೆಯ ವಿರುದ್ಧ ನಿರ್ಣಯವನ್ನು ಮಂಡನೆ ಮಾಡಿದರು.  ಆಡಳಿತ ಪಕ್ಷದ ಸದಸ್ಯರು ಬೆಂಬಲ ಸೂಚಿಸಿದ ನಂತರ ಸದನವು ಅಂಗೀಕಾರ ನೀಡಿತು.

Key words: Karnataka, session, pass, against, NEET