ಮೈಸೂರು,ಆಗಸ್ಟ್,16,2022(www.justkannada.in): ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ನೀವು ಪಾಲ್ಗೊಂಡು ಮೈಸೂರಿನ ಅದ್ಭುತಗಳನ್ನು ಕರುನಾಡಿನ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಿಸುವ ಸುವರ್ಣಾವಕಾಶವಿದೆ.
ಮೈಸೂರು ಜಿಲ್ಲೆಯ ಆರು ಸ್ಥಳಗಳು ಈಗಾಗಲೇ ಕರ್ನಾಟಕದ ನೂರು ಅದ್ಭುತಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಈ ಆರು ಸ್ಥಳಗಳಿಗೆ ವೋಟ್ ಮಾಡುವ ಮೂಲಕ ನೀವು ಇವುಗಳನ್ನು ರಾಜ್ಯದ ಅದ್ಭುತವನ್ನಾಗಿ ಮಾಡಬಹುದು.
ಮೈಸೂರಿನ ನಾಮ ನಿರ್ದೇಶನಗಳು :
ಇಂಡೋ ಸಾರ್ಸನಿಕ್ ಶೈಲಿಯ ಭಾರತದ ಅತಿ ಸುಂದರ ಅರಮನೆಗಳಲ್ಲೊಂದು, ದಸರೆಯ ಕೇಂದ್ರಬಿಂದುವಾಗಿರುವ ಮೈಸೂರು ಅರಮನೆ. ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನಲ್ಲಿರುವ ಹೊಯ್ಸಳ ಶಿಲ್ಪಕಲೆಗೆ ಪ್ರಸಿದ್ಧಿ ಪಡೆದಿರುವ ದೇವಾಲಯ ಟಿ ನರಸೀಪುರದ ಸೋಮನಾಥಪುರ ಕೇಶವ ದೇವಾಲಯ. ಏಷ್ಯಾದ ೨೫ ಉನ್ನತ ದರ್ಜೆಯ ಮೃಗಾಲಯಗಳ ಪೈಕಿ ಏಳನೇ ಸ್ಥಾನದಲ್ಲಿರುವ ೧೬೦೦ಕ್ಕೂ ಅಧಿಕ ಪ್ರಾಣಿ ಪಕ್ಷಿಗಳಿರುವ ಮೃಗಾಲಯ ಚಾಮರಾಜೇಂದ್ರ ಮೃಗಾಲಯ . ಕರ್ನಾಟಕದ ಮರಳುಗಾಡು ಎಂದೇ ಖ್ಯಾತವಾಗಿರುವ ಮರಳಿನಲ್ಲಿ ಮುಳುಗಿದ್ದ ದೇವಾಲಯಗಳಿರುವ ತಾಣ . ನೈಸರ್ಗಿಕವಾಗಿಯೂ ಸುಂದರವಾಗಿರುವ ತಲಕಾಡು. ವಿಶ್ವ ಮಾನ್ಯತೆ ಇರುವ ರಾಷ್ಟ್ರೀಯ ಉದ್ಯಾನ, ಹುಲಿ ಸಂರಕ್ಷಿತ ಅರಣ್ಯ ನಾಗರಹೊಳೆ ಅಭಯಾರಣ್ಯ. ೧೭೫ ಅಡಿ ಎತ್ತರದ ಅವಳಿ ಗೋಪುರ, ಭಾರತದ ಚರ್ಚ್ ಗಳಲ್ಲೇ ಅತಿ ಹೆಚ್ಚು ಎತ್ತರದ್ದು ಮೈಸೂರಿನ ಅಶೋಕ ರಸ್ತೆಯಲ್ಲಿರುವ ಸಂತ ಫಿಲೋಮಿನಾ ಚರ್ಚ್.
ಈಗಾಗಲೇ https://www.7wonders ofkarnataka.com ನಲ್ಲಿ ನಾಮ ನಿರ್ದೇಶನಗೊಂಡಿರುವ ನೂರು ಅದ್ಭುತಗಳ ಸಾಲಿನಲ್ಲಿ ನಿಂತಿರುವ ಮೈಸೂರಿನ ಈ ಆರು ಸ್ಥಳಗಳ ಪೈಕಿ ನಿಮ್ಮ ಆಯ್ಕೆಯ ಸ್ಥಳಕ್ಕೆ ತಲಾ 10 ವೋಟ್ ಮಾಡಿ ಇವನ್ನು ರಾಜ್ಯದ ಏಳು ಅದ್ಭುತಗಳನ್ನಾಗಿಸಬಹುದು.
ಪ್ರಸ್ತುತ 100 ಅದ್ಭುತಗಳ ಪಟ್ಟಿಯಲ್ಲಿರುವ ಸ್ಥಳಗಳಲ್ಲಿ ಅತಿ ಹೆಚ್ಚು ವೋಟ್ ಪಡೆದ ಸ್ಥಳಗಳು ಮುಂದಿನ ಹಂತದಲ್ಲಿ ಅಂತಿಮ 49ರ ಪಟ್ಟಿಗೆ ಬರಲಿವೆ. ತದನಂತರ ಅಂತಿಮ 21ರ ಪಟ್ಟಿಯಲ್ಲಿ ಉಳಿದು ಬಳಿಕ ಪ್ರವಾಸೋದ್ಯಮ ಇಲಾಖೆ ತಜ್ಞರ ಸಮಿತಿಯ ಆಯ್ಕೆಯಂತೆ ಕರ್ನಾಟಕದ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಬಹುದು, ಹೀಗಾಗಿ ಮೈಸೂರು ಜಿಲ್ಲೆಯ ಪ್ರತಿಯೊಬ್ಬರೂ ತಮ್ಮ ಪಾಲಿನ ಹತ್ತು ವೋಟ್‌ಗಳನ್ನು ತಮ್ಮ ನೆಚ್ಚಿನ ಸ್ಥಳಕ್ಕೆ ನೀಡಬಹುದು. ಜತೆಗೆ ಸ್ನೇಹಿತರು, ಕುಟುಂಬ ಸದಸ್ಯರೂ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬಹುದು.
ಏನಿದು ಅಭಿಯಾನ?:
ಪ್ರಪಂಚದ ಏಳು ಅದ್ಭುತಗಳನ್ನು ಎಂದೋ ಹುಡುಕಿಯಾಗಿದೆ. ಅದೇ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ‘ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಸ್ಥೆಯು ಪ್ರವಾಸೋದ್ಯಮ ಇಲಾಖೆಯ ಸಹಭಾಗಿತ್ವದಲ್ಲಿ ಈ ವಿಶಿಷ್ಟ ಅಭಿಯಾನ ಹಮ್ಮಿಕೊಂಡಿದೆ.
‘ಕರ್ನಾಟಕ ಒಂದು ರಾಜ್ಯ ಹಲವು ಜಗತ್ತು’ ಎಂದೇ ಪ್ರಸಿದ್ಧಿ. ಇಂತಹ ಕರ್ನಾಟಕದ ಸುಂದರ ಕರಾವಳಿತೀರ, ದುರ್ಗಮ ಕಾನನಗಳು, ರಮಣೀಯ ಜಲಪಾತಗಳು ಸಮುದ್ರ ತೀರಗಳು, ಐತಿಹಾಸಿಕ ಸ್ಥಳಗಳನ್ನು ಇಂತಹ ಹಲವು ಜಗತ್ತುಗಳನ್ನು ಒಳಗೊಂಡಿದೆ. ಈ ಪೈಕಿ ಏಳು ಅದ್ಭುತಗಳನ್ನು ಸಾರ್ವಜನಿಕರೇ ಗುರುತಿಸಲು ರೂಪಿಸಿರುವ ವೇದಿಕೆಯೇ ಬನ್ನಿ ಹುಡುಕೋಣ ಕರ್ನಾಟಕದ ಏಳು ಅದ್ಭುತಗಳನ್ನು’ ಎಂಬ ಈ ಅಭಿಯಾನ.
ಯಾವ ಹಂತದಲ್ಲಿದೆ ಅಭಿಯಾನ?:
ಮೇ ತಿಂಗಳಲ್ಲಿ ಚಾಲನೆ ದೊರೆತಿರುವ ಆರು ಹಂತದ ಈ ಅಭಿಯಾನ ಎರಡನೇ ಹಂತಕ್ಕೆ ತಲುಪಿದೆ, ಮೊದಲ ಹಂತದಲ್ಲಿ ಸಾರ್ವಜನಿಕರು ವೆಬ್ ಸೈಟ್ ಮೂಲಕ ತಮ್ಮ ನೆಚ್ಚಿನ ಊರು, ಜಿಲ್ಲೆ, ತಾಲೂಕು ಸೇರಿ ರಾಜ್ಯದ ಯಾವುದೇ ಜಾಗದಲ್ಲಿ ನಾವು ನೋಡಿದ ಅದ್ಭುತ ಪ್ರವಾಸಿ ಸ್ಥಳ : ಪಾರಂಪರಿಕ ತಾಣ, ಅತ್ಯಾಧುವಿಗೆ ಕಟ್ಟಡ, ರಸ್ತೆ ಹೀಗೆ ಅದ್ಭುತ ಎನಿಸುವ ಸ್ಥಳದ ಫೋಟೊ ಅಪ್ ಲೋಡ್ ಮಾಡಿ ಆ ಸ್ಥಳದ ವೈಶಿಷ್ಟ್ಯವನ್ನು ದಾಖಲು ಮಾಡಿ ನಾಮನಿರ್ದೇಶನ ಮಾಡಿದ್ದಾರೆ.
ಇದೀಗ, ಎರಡನೇ ಹಂತದಲ್ಲಿ ಸಾರ್ವಜನಿಕರಿಂದ ನಾಮನಿರ್ದೇಶನಗೊಂಡ ಅದ್ಭುತಗಳಲ್ಲಿ 100 ಸ್ಥಳಗಳನ್ನು ಆಯ್ಕೆ ಮಾಡಿ, ಅತ್ಯದ್ಭುತ ತಾಣಗಳು ಯಾವುವು ಎಂಬ ಬಗ್ಗೆ ವೋಟಿಂಗ್ ನಡೆಯುತ್ತಿದೆ.
ವೋಟಿಂಗ್ ನಿಯಮ
– ಅಯ್ಕೆಯಾಗಿರುವ ನೂರು ಅದ್ಭುತಗಳಿಗೂ ವೋಟ್ ಹಾಕಬಹುದು. – ಪ್ರತಿಯೊಂದು ಅದ್ಭುತಕ್ಕೂ ಹತ್ತು ವೋಟ್ ಮಾಡಲು ಅವಕಾಶವಿರುತ್ತದೆ. – ಈ ಮೆಗಾ ಅಭಿಯಾನದ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದವರಿಗೂ ತಿಳಿಸಿ. -ತನ್ಮೂಲಕ ನಿಮ್ಮ ಜಿಲ್ಲೆಯ ಸ್ಥಳವನ್ನು ಅದ್ಭುತವನ್ನಾಗಿಸಿ.
Key words: Karnataka- Seven Wonders –Campaign-Vote – Mysore..
ENGLISH SUMMARY…
Seven wonders of Karnataka campaign: Please vote for these six tourist places of Mysuru
Mysuru, August 16, 2022 (www.justkannada.in): A campaign to identify the seven wonders of Karnataka, online with the seven wonders of the world has been launched across the state. You can also participate in the campaign by voting for your favorite place in Mysuru District.
Six places in the Mysuru district have already been placed in the 100 wonders of Karnataka. Nominations from Mysuru: Ambavilas Palace, Somanathpur Keshava temple in T. Narasipura, Chamarajendra Zoological Garden, Talakadu, Brindavan garden, Nagarhole Tiger Reserve Forest, St. Philomena’s church.
You can vote for your favorite place by visiting the website: https://www.7wonders ofkarnataka.com
Keywords: Seven wonders of Karnataka/ Six wonders/ Mysuru/ vote