ಬೆಂಗಳೂರು, ಜುಲೈ 11, 2020 (www.justkannada.in): ಕೊರೊನಾ ನಿಯಂತ್ರಣದಲ್ಲಿ ಭ್ರಷ್ಟಾಚಾರ ಆರೋಪ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಮರ ಸಾರಿದೆ.
ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ “ಲೆಕ್ಕಕೊಡಿ” ಅಭಿಯಾನ ಶುರು ಮಾಡಿದೆ ಕಾಂಗ್ರೆಸ್ ಪಕ್ಷ. #ಲೆಕ್ಕಕೊಡಿ ಎಂಬ ಹ್ಯಾಷ್ ಟ್ಯಾಗ್ನೊಂದಿಗೆ ವಿಡಿಯೋ ಅಭಿಯಾನವನ್ನು ಕಾಂಗ್ರೆಸ್ ಆರಂಭಿಸಿದೆ.
ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಎಷ್ಟು ಹಣ ಖರ್ಚು ಮಾಡಿದೆ.? ಕೇಂದ್ರ ಎಷ್ಟು ನೀಡಿದೆ.? ಪಿಪಿಇ ಕಿಟ್, ಟೆಸ್ಟ್ ಕಿಟ್, ಗ್ಲೌಸ್, ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್ ಗಳ ಮಾರುಕಟ್ಟೆ ದರ ಎಷ್ಟು.? ನೀವು ಪ್ರತಿಯೊಂದನ್ನು ಯಾವ ದರಕ್ಕೆ ಖರೀದಿ ಮಾಡಿದ್ದೀರಿ..? ಈ ಎಲ್ಲದರ ಸಂಪೂರ್ಣ ಲೆಕ್ಕಕೊಡಿ ಎಂದು ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹಿಸಿದೆ
ರಾಜ್ಯ ಸರ್ಕಾರದ ಮುಂದೆ 6ಪ್ರಶ್ನೆಗಳನ್ನಿಟ್ಟ ಮಾಜಿ ಸಿಎಂ ಸಿದ್ದು. ವೀಡಿಯೋ ಮಾಡಿ ಸಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಎಲ್ಲಾ ಸಂಸದರು, ಶಾಸಕರು ಹಾಗೂ ಕಾರ್ಯಕರ್ತರು ವೀಡಿಯೋ ಶೇರ್ ಮಾಡುವಂತೆ ಮನವಿ ಮಾಡಿದ್ದಾರೆ. ಅಭಿಯಾನದ ಬಗ್ಗೆ ಟ್ವಿಟ್ಟರ್ ಮಾಜಿ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.