ಬೆಂಗಳೂರು,ನವೆಂಬರ್,9,2020(www.justkannada.in): ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೆಎಎಸ್ ಅಧಿಕಾರಿ ಡಾ.ಬಿ.ಸುಧಾ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ವಶಕ್ಕೆ ಪಡೆದು ಪರಿಶೀಲಿಸಿದ್ದು ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ.
ಈ ಬಗ್ಗೆ ಎಸಿಬಿ ಐಜಿಪಿ ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ. ಕೆಎಎಸ್ ಅಧಿಕಾರಿ ಡಾ.ಬಿ. ಸುಧಾ ಮತ್ತು ಅವರ ಸಂಬಂಧಿಕರು ಮತ್ತು ಪರಿಚಯಸ್ಥರ ಮನೆಗಳಲ್ಲಿ ನೂರಾರು ಕೋಟಿ ಮೌಲ್ಯದ ಸ್ಥಿರಾಸ್ತಿ ಪತ್ರಗಳು ಪತ್ತೆಯಾಗಿವೆ.
ಆರೋಪಿಗಳ 50 ಬ್ಯಾಂಕ್ ಖಾತೆಗಳು ಪತ್ತೆಯಾಗಿವೆ. ಬ್ಯಾಂಕ್ ಖಾತೆಗಳಲ್ಲಿ ರೂ. 3.5 ಕೋಟಿ ಠೇವಣಿ ಪತ್ತೆಯಾಗಿದೆ. ಬೆಂಗಳೂರು,ಮೈಸೂರು ಉಡುಪಿ ಸೇರಿ ಏಳು ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲಿಸಲಾಗಿದ್ದು ದಾಳಿ ವೇಳೆ 36,89,000 ರೂ ಪತ್ತೆಯಾಗಿದೆ ಎಂದು ಚಂದ್ರ ಶೇಖರ್ ಮಾಹಿತಿ ನೀಡಿದರು.
ಇನ್ನು ದಾಳಿ ವೇಳೆ 3.7 ಕೆ.ಜಿ. ಚಿನ್ನ ಮತ್ತು 10.5 ಕೆ.ಜಿ. ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ದಾಖಲೆ ಸಮೇತ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಆರೋಪಿಗಳಿಗೆ ಯಾವುದೇ ನೋಟೀಸ್ ನೀಡಿಲ್ಲ ಎಂದು ಎಸಿಬಿ ಐಜಿಪಿ ಚಂದ್ರಶೇಖರ್ ತಿಳಿಸಿದರು.
Key words: KAS officer -Dr B,sudha- house-ACB- 3.7 kg –gold-Detect – ACB IGP-Chandra shekar