ಬೆಂಗಳೂರು, ನವೆಂಬರ್, 11,2023(www.justkannada.in): ಕೆಇಎ ನಡೆಸಿದ ಎಫ್ ಡಿಎ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ತನಿಖೆಯನ್ನು ಗೃಹ ಇಲಾಖೆ ಸೂಚನೆ ಮೇರೆಗೆ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ.
ಈ ಸಂಬಂಧ ಯಾದಗಿರಿ ನಗರ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿದ್ದವು. ಗೃಹ ಇಲಾಖೆಯ ಸೂಚನೆ ಮೇರೆಗೆ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹೀತೇಂದ್ರ ಸಿಐಡಿ ತನಿಖಾಧಿಕಾರಿಗೆ ಪ್ರಕರಣದ ಕಡತಗಳನ್ನು ಹಸ್ತಾಂತರ ಮಾಡಿದ್ದಾರೆ.
ಕೆಇಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಕಿಂಗ್ ಪಿನ್ ಆರ್.ಡಿ ಪಾಟೀಲ್ ನನ್ನು ನಿನ್ನೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಆರ್ ಡಿ ಪಾಟೀಲ್ ನನ್ನು ಬಂಧಿಸಿದ್ದರು.
Key words: KEA exam- illegality- case – CID-Investigation