ಬೆಂಗಳೂರು, ಆಗಸ್ಟ್ 26, 2020 (www.justkannada.in): ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ಇಂದಿನಿಂದ ಆರಂಭವಾಗಿದೆ.
ಇಂದಿನಿಂದ ಚಿತ್ರೀಕರಣಕ್ಕೆ ಖ್ಯಾತ ನಟ ಪ್ರಕಾಶ್ ರೈ ಕೂಡಾ ಸೇರಿಕೊಂಡಿದ್ದಾರೆ. ಪ್ರಕಾಶ್ ರೈ ಒಳಗೊಂಡ ದೃಶ್ಯವನ್ನು ನಿರ್ದೇಶಕ ಪ್ರಶಾಂತ್ ನೀಲ್ ಸಂಯೋಜಿಸುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೆಜಿಎಫ್ 2 ಸಿನಿಮಾ ಶೂಟಿಂಗ್ ಆರಂಭವಾಗುತ್ತಿರುವ ಸುದ್ದಿ ತಿಳಿಯುತ್ತಿದ್ದಂತೇ ಭಾರೀ ಸಂಖ್ಯೆಯಲ್ಲಿ ಪ್ರತಿಕ್ರಿಯಿಸಿರುವ ಅಭಿಮಾನಿಗಳು ಬೇಗ ಶೂಟಿಂಗ್ ಮುಗಿದು ಸಿನಿಮಾ ಬಿಡುಗಡೆಯಾಗಲಿ ಎಂದು ಹಾರೈಸಿದ್ದಾರೆ.