ಡಿ.ಗುಕೇಶ್ ಸೇರಿ ನಾಲ್ವರು ಕ್ರೀಡಾ ಸಾಧಕರಿಗೆ ‘ಖೇಲ್ ರತ್ನ ಪ್ರಶಸ್ತಿ’

ನವದೆಹಲಿ,ಜನವರಿ,2,2025 (www.justkannada.in): ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್ ಸೇರಿ ನಾಲ್ವರು ಕ್ರೀಡಾ ಸಾಧಕರಿಗೆ ಖೇಲ್ ರತ್ನ ಪ್ರಶಸ್ತಿಯನ್ನ ಪ್ರಕಟಿಸಲಾಗಿದೆ.

ಕಳೆದ ವರ್ಷ ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ದೇಶಕ್ಕಾಗಿ ಎರಡು ಕಂಚಿನ ಪದಕಗಳನ್ನು ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದ ಮಹಿಳಾ ಶೂಟರ್ ಮನು ಭಾಕರ್, ವಿಶ್ವ ಚೆಸ್ ಚಾಂಪಿಯನ್​ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದ ಡಿ. ಗುಕೇಶ್, ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜನವರಿ 17 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ವಿಶೇಷವಾಗಿ ಆಯೋಜಿಸಲಾಗುವ ಸಮಾರಂಭದಲ್ಲಿ ಈ ನಾಲ್ವರು ಕ್ರೀಡಾ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಖೇಲ್ ರತ್ನ ಪ್ರಶಸ್ತಿಯನ್ನು  ಪ್ರದಾನ ಮಾಡಲಿದ್ದಾರೆ.

Key words:  sportspersons, D. Gukesh, Khel Ratna Award