ಬಳ್ಳಾರಿ, ಜನವರಿ, 25,2025 (www.justkannada.in): ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ದುಷ್ಕರ್ಮಿಗಳು ಕಾರಿನಲ್ಲಿ ಅಪಹರಿಸಿ ಇದೀಗ 6 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಸತ್ಯನಾರಾಯಣ ಪೇಟೆಯ ಶನೇಶ್ವರ ಗುಡಿ ಬಳಿ ವಾಕಿಂಗ್ ಮಾಡುವಾಗ ವೈದ್ಯ ಸುನೀಲ್ ಅವರನ್ನ ಅವರನ್ನ ಕಾರಿನಲ್ಲಿ ಅಪಹರಣಕಾರರು ಕಿಡ್ನಾಪ್ ಮಾಡಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಟಾಟಾ ಇಂಡಿಗೋ ಕಾರಿನಲ್ಲಿ ದುಷ್ಕರ್ಮಿಗಳು ಅಪಹರಿಸಿದ್ದಾರೆ ಎನ್ನಲಾಗಿದೆ.
ದುಷ್ಕರ್ಮಿಗಳು 6 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಕಿಡ್ನಾಪ್ ಮಾಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
Key words: Ballari, Kidnap, district hospital, pediatrician,