“ರಾಮನ ರಾಜ್ಯವೋ, ರಾವಣನ ರಾಜ್ಯವೋ” : ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಟೀಕೆ

ಬೆಂಗಳೂರು,ಮಾರ್ಚ್,28,2021(www.justkannada.in) : ಅಯೋಧ್ಯೆಯಲ್ಲಿ ಮರ್ಯಾದಾಪುರುಷ ಶ್ರೀರಾಮನ ದೇವಸ್ಥಾನ ಕಟ್ಟಲು ಶುರು ಮಾಡಿದ್ದಾರೆ. ದೇವಸ್ಥಾನ ಕಟ್ಟುವ ಮೊದಲ ವರ್ಷದಲ್ಲೇ ಒಂದು ಹೆಣ್ಣು ಮಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ನೋಡಿದರೆ ರಾಮನ ರಾಜ್ಯವೋ, ರಾವಣನ ರಾಜ್ಯವೋ ಎಂದೆನಿಸುತ್ತಿದೆ ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಟೀಕಿಸಿದ್ದಾರೆ.

Government,Social,Economic,Educational,survey,Report,Should,receive,Former CM,Siddaramaiah 

ರಾಜ್ಯದಲ್ಲಿ ಕಾಮ ಕ್ರೋಧಗಳು ತಾಂಡವಾಡುತ್ತಿದೆ, ಅದನ್ನು ದಹನ ಮಾಡುವಂತಾಗಲಿ

ಮಾಧ್ಯಮದವರೊಂದಿಗ ಮಾತನಾಡಿದ ಅವರು, ನಿರ್ಭಯಾ ಪ್ರಕರಣ ವರದಿ ಇರಬಹುದು ಅಥವಾ ನನ್ನ ನೇತೃತ್ವದಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಸಮಿತಿ ನೀಡಿದ ಆರು ಸಾವಿರ ಪುಟದ ವರದಿಯಲ್ಲಿ ಇಂತಹ ಸಂದರ್ಭದಲ್ಲಿ ಪೊಲೀಸರು ಯಾವ ರೀತಿ ನಡೆದುಕೊಳ್ಳಬೇಕು ಎಂದು ಹೇಳಲಾಗಿದೆ. ಇವತ್ತು ಹೋಳಿ ಜೊತೆಗೆ ಕಾಮದಹನ ಕೂಡಾ ಇದೆ. ರಾಜ್ಯದಲ್ಲಿ ಕಾಮ ಕ್ರೋಧಗಳು ತಾಂಡವಾಡುತ್ತಿದೆ, ಅದನ್ನು ದಹನ ಮಾಡುವಂತಾಗಲಿ ಎಂದಿದ್ದಾರೆ.

ಪ್ರತಿನಿತ್ಯ ಆ ಹೆಣ್ಣುಮಗಳು ತನಗೆ ರಕ್ಷಣೆ ಇಲ್ಲ, ಕುಟುಂಬದವರಿಗೆ ರಕ್ಷಣೆ ಇಲ್ಲವೆಂದು ಹೇಳುತ್ತಿದ್ದಾಳೆ. ರಾಜ್ಯದಲ್ಲಿ ಕಾನೂನು ಪರಿಪಾಲನೆ ಇದ್ದಿದ್ದೇ ಆದರೆ, ದಿನೇಶ್ ಕಲ್ಲಹಳ್ಳಿ ದೂರು ಕೊಟ್ಟಾಗ ಏಕೆ ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ಪ್ರಶ್ನಿಸಿದರು.

ಯುವತಿಯ ಪೋಷಕರು ಬಿಜಾಪುರ ಮೂಲದವರು, ಬೆಳಗಾವಿಯಲ್ಲಿ ದೂರು ಕೊಡಿಸಿದ್ದು ಏಕೆ?

ಎಫ್‌ಐಆರ್ ದಾಖಲಾಗಾದೇ ಎಸ್‌ಐಟಿ ರಚನೇ ಹೇಗೆ ಮಾಡಿದರು? ಆ ವ್ಯಕ್ತಿ ಬೆಂಗಳೂರಿನಲ್ಲೇ ಇದ್ದರೂ ಬೇರೆ ವ್ಯಕ್ತಿ ಕೈಯಲ್ಲಿ ಹೇಗೆ ದೂರು ಕೊಡಿಸಿದಿರಿ? ಆ ಯುವತಿಯ ಪೋಷಕರು ಬಿಜಾಪುರ ಮೂಲದವರಾಗಿದರೂ, ಬೆಳಗಾವಿಗೆ ಕರ್ಕೊಂಡು ಹೋಗಿ ಅಲ್ಲಿ ದೂರು ಕೊಡಿಸಿದ್ದು ಏಕೆ? 376 ಕೇಸ್ ದಾಖಲಾಗಿದ್ದರೆ ಸಾಮಾನ್ಯ ವ್ಯಕ್ತಿಗಳನ್ನು ಸುಮ್ನೆ ಬಿಡ್ತಿದ್ರಾ? ಎಂದು ಪ್ರಶ್ನಿಸಿದರು.

ಆರೋಪಿಯಾಗಿರುವ ವ್ಯಕ್ತಿಯನ್ನ ಎಸ್‌ಐಟಿ ಮೊದಲು ಬಂಧಿಸಬೇಕು

kingdom-Rama-Ravana's kingdom-Former MP-V.S.Ugrappa
ಕೃಪೆ : internet

ಆ ಯುವತಿಗೆ ಯಾವ ಸಂಪರ್ಕ ಇರಲಿಲ್ಲ ಎಂದು ನಮ್ಮ ಅಧ್ಯಕ್ಷರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಸೆ.376 ಅಡಿಯಲ್ಲಿ ಆರೋಪಿಯಾಗಿರುವ ವ್ಯಕ್ತಿಯನ್ನ ಎಸ್‌ಐಟಿ ಮೊದಲು ಬಂಧಿಸಬೇಕು. ಎಸ್‌ಐಟಿ ತನಿಖೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

key words : kingdom-Rama-Ravana’s kingdom-Former MP-
V.S.Ugrappa