ಬೆಂಗಳೂರು, ಡಿಸೆಂಬರ್ 16, 2021 (www.justkannada.in): ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಸದ್ಯ ದುಬೈನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಮಂಡಿ ನೋವಿನಿಂದ ಬಳಲುತ್ತಿದ್ದ ಅವರಿಗೆ ಇತ್ತೀಚೆಗೆ ಅದು ಉಲ್ಬಣಗೊಂಡಿದ್ದರಿಂದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವಂತೆ ವೈದ್ಯರು ಅವರಿಗೆ ಸಲಹೆ ನೀಡಿದ್ದರು.
ವೈದ್ಯರ ಸಲಹೆಯಂತೆ ಮಹೇಶ್ ಬಾಬು ಕುಟುಂಬ ಸಮೇತ ಸ್ಪೇನ್ಗೆ ತೆರಳಿದ್ದರು. ಅಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಸದ್ಯ ದುಬೈನಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ.
ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೂ ಅವರು ಅಲ್ಲೆಯೇ ಇರಲಿದ್ದಾರೆ. ಹಾಗಾಗಿ ತಮ್ಮ ನೂತನ ಚಿತ್ರ ‘ಸರ್ಕಾರು ವಾರಿ ಪಾಠ’ ಚಿತ್ರೀಕರಣದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ.