ಬಟ್ಟೆ ಒಗೆಯುವ ವೇಳೆ ತುಂಡಾಗಿ ಬಿದ್ದ ವಿದ್ಯುತ್ ತಂತಿ:  ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

ಕೊಡಗು,ಅ,23,2019(www.justkannada.in): ಬಟ್ಟೆ ಒಗೆಯುವ ವೇಳೆ ವಿದ್ಯುತ್ ತಂತಿ ತುಂಡಾಗಿ ಬಿದ್ದು  ಇಬ್ಬರು ಮಹಿಳೆಯರಿಗೆ ಗಂಭೀರ ಗಾಯವಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಬೆಕ್ಕೆಸೊಡ್ಲೂರಿನಲ್ಲಿ ಈ ಘಟನೆ ನಡೆದಿದೆ. ಕಮಲಮ್ಮ (52), ಚೌಡಮ್ಮ‌ (72) ಗಂಭೀರ ಗಾಯಗೊಂಡ ಮಹಿಳೆಯರು. ಇಬ್ಬರು ಮನೆ‌ ಮುಂದೆ ಬಟ್ಟೆ ತೊಳೆಯುವ ವೇಳೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಈ ಘಟನೆ ನಡೆದಿದೆ. ಸದ್ಯ ಘಟನೆಯಲ್ಲಿ ಇಬ್ಬರು  ಮಹಿಳೆಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಬ್ಬರಿಗೂ ಪೊನ್ನಂಪೇಟೆ ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯುತ್ ತಂತಿ ಹಳೆಯದಾಗಿದ್ದ ಹಿನ್ನಲೆ ಈ  ಅವಘಡ‌ ಸಂಭವಿಸಿದೆ. ಇನ್ನು ವಿದ್ಯುತ್ ತಂತಿ ಬದಲಿಸುವಂತೆ ಚೆಸ್ಕಾಂಗೆ ಗ್ರಾಮಸ್ಥರು ಮನವಿ ಮಾಡಿದ್ದರು. ಆದರೆ ಚೆಸ್ಕಾಂ ಅಧಿಕಾರಿಗಳು ಕ್ರಮ ಕೈಗೊಳ್ಳದೇ ನಿರ್ಲಕ್ಷ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಕುರಿತು ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: kodagu-electrical wire – falls- Serious injury – two women