ಕೊಡಗು,ಮೇ,28,2019(www.justkannada.in): ಕೊಡಗಿನಲ್ಲಿ ಕಾಡಾನೆ ಮಾನವ ಸಂಘರ್ಷ ಮುಂದುವರೆದಿದ್ದು ಪುಂಡಾಟ ಮೆರೆಯುತ್ತಿದ್ದ ಕಾಡಾನೆಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ.
ಕೊಡಗು ಜಿಲ್ಲೆಯ ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ ಪಶುವೈದ್ಯ ಡಾ ಮುಜೀಬ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಕಾಡಾನೆ ಸೆರೆ ಹಿಡಿಯಲಾಗಿದೆ. ಅಭಿಮನ್ಯು, ಹರ್ಷ, ಅಜಯ, ಧನಂಜಯ, ವಿಕ್ರಮ, ಕೃಷ್ಣ, ಲಕ್ಷಣ, ಈಶ್ವರ ಸಾಕಾನೆಗಳು ಕಾರ್ಯಾಚರಣೆಯಲ್ಲಿ ಭಾಗಿ
40 ಕ್ಕೂ ಅಧಿಕ ಅರಣ್ಯ ಸಿಬ್ಬಂದಿಗಳು, 8 ಸಾಕಾನೆಗಳ ಬಳಕೆ ಮಾಡಲಾಗಿದ್ದು ಮಡಿಕೇರಿ, ವಿರಾಜಪೇಟೆ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನೇತೃತ್ವ ವಹಿಸಿದ್ದರು. ಎಸಿಎಫ್ ಚಿಣ್ಣಪ್ಪ, ಡಿಎಫ್ಓ ಮಂಜುನಾಥ್, ರೇಂಜರ್ ಅರುಣ್ ಭಾಗಿಯಾಗಿದ್ದರು.
Key words: #kodagu #foreststaff #elephant