ಕೊಡಗು,ಆ,7,2020(www.justkannada.in): ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಹಲವು ಜಿಲ್ಲೆಗಳು ನೆರೆ ಭೀತಿ ಎದುರಿಸುತ್ತಿವೆ. ಈ ಮಧ್ಯೆ ಕೊಡಗು ಜಿಲ್ಲೆಯಲ್ಲೂ ವರುಣನ ಅಬ್ಬರ ಜೋರಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಭಾರಿ ಮಳೆಯಿಂದಾಗಿ ರಸ್ತೆ ಸಂಪರ್ಕ ಕಡಿತಗೊಂಡ ಹಿನ್ನೆಲೆ ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಲು ಕುಟುಂಬಸ್ಥರು ಪರದಾಡಿದ ಘಟನೆ ಮಡಿಕೇರಿ ತಾಲ್ಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ನಡೆದಿದೆ. ಅಯ್ಯಂಗೇರಿ ಗ್ರಾಮದ ಮಮತಾ ಈಶ್ವರ ಎಂಬ ಗರ್ಭಿಣಿ ಮಹಿಳೆಯನ್ನ ಆಸ್ಪತ್ರೆಗೆ ದಾಖಲಿಸಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಈ ಮಧ್ಯೆ ಸ್ಥಳೀಯ ಕುಯ್ಯಮುಡಿ ಕುಟುಂಬಸ್ಥರು ಎನ್ ಡಿಆರ್ ಎಫ್ ತಂಡದ ಸಹಕಾರದೊಂದಿಗೆ ಗರ್ಭಿಣಿ ಮಹಿಳೆ ಮಮತಾ ಈಶ್ವರ ಅವರನ್ನ ಸುರಕ್ಷಿತವಾಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈ ಸೇವಾ ಕಾರ್ಯದಲ್ಲಿ ಲವ, ರಂಜು, ಶಂಬು, ಕಿಶು, ಧನು ಮತ್ತಿತರರು ಭಾಗಿಯಾಗಿದ್ದರು.
ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ಥವಾಗಿದೆ. ನಿನ್ನೆ ಮನೆಗಳ ಮೇಲೆ ಬ್ರಹ್ಮಗಿರಿ ಬೆಟ್ಟ ಕುಸಿದು ಮನೆಯಲ್ಲಿದ್ದ ಅರ್ಚಕರ ಕುಟುಂಬ ಅವೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
Key words: kodagu- Heavy rain-Pregnant women-hospital