ಕೊಳ್ಳೇಗಾಲ,ಅಕ್ಟೋಬರ್,31,2022(www.justkannada.in): ಕೊಳ್ಳೇಗಾಲ ನಗರಸಭೆ 7 ವಾರ್ಡ್ ಗಳಿಗೆ ನಡೆದ ಉಪ ಚುನಾವಣೆಯಲ್ಲಿ ಶಾಸಕ ಎನ್. ಮಹೇಶ್ ಅವರ ಬೆಂಬಲಿಗರು ಗೆಲುವು ಸಾಧಿಸಿದ್ದಾರೆ.
ಕೊಳ್ಳೇಗಾಲ ನಗರಸಭೆ ಉಪ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, 7 ವಾರ್ಡ್ಗಳ ಪೈಕಿ ಬಿಜೆಪಿ 6ರಲ್ಲಿ ಭರ್ಜರಿ ಜಯ ಸಾಧಿಸಿದೆ. ಒಂದು ವಾರ್ಡ್ನಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು ದಕ್ಕಿದ್ದು ಈ ಮೂಲಕ ಕಾಂಗ್ರೆಸ್ ಗೆ ಮುಖಭಂಗವಾಗಿದೆ.
ಬಿಎಸ್ಪಿ ಪಕ್ಷದಿಂದ ಚುನಾಯಿತರಾಗಿ ಆಯ್ಕೆಯಾಗಿದ್ದ ಸದಸ್ಯರುಗಳು ನಗರಸಭೆಗೆ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಬಿಎಸ್ ಪಿ ಪಕ್ಷದಿಂದ ಸ್ಪರ್ಧಿಸಿದ್ದ ಜಯಮೇರಿ ಅವರನ್ನು ಬೆಂಬಲಿಸಲಿಲ್ಲ ಎಂದು ಜಿಲ್ಲಾಧಿಕಾರಿಗಳ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನಲೆ ಜಿಲ್ಲಾಧಿಕಾರಿಗಳ ಕೋರ್ಟ್ ನಲ್ಲಿ 7.ಬಿಎಸ್ಸಿ ಸದಸ್ಯರನ್ನು ಅನರ್ಹಗೊಳಿಸಲಾಗಿತ್ತು.
ನಗರಸಭೆ ಅಧ್ಯಕ್ಷ ಚುನಾವಣೆಯಲ್ಲಿ ವಿಪ್ ಉಲ್ಲಂಘನೆಯಾಗಿತ್ತು. ಬಿಎಸ್ಪಿಯ 7 ಸದಸ್ಯರು ವಿಪ್ ಉಲ್ಲಂಘಿಸಿ ಅನರ್ಹಗೊಂಡಿದ್ದರು. ಅನರ್ಹಗೊಂಡ ಸ್ಥಾನಗಳಿಗೆ ಉಪ ಚುನಾವಣೆ ನಡೆದಿತ್ತು.
ಉಪಚುನಾವಣೆಗೆ 7ಸ್ಥಾನಗಳಿಗೆ ಶಾಸಕ ಎನ್ ಮಹೇಶ್ ಬೆಂಬಲಿತ ಸದಸ್ಯರುಗಳಿಗೆ ಬಿಜೆಪಿ ಟಿಕೆಟ್ ನೀಡಲಾಗಿತ್ತು. ಇದೀಗ ಉಪಚುನಾವಣೆ ಯಲ್ಲಿ 6 ಬಿಜೆಪಿ ಸದಸ್ಯರು ಆಯ್ಕೆಯಾಗಿದ್ದಾರೆ.
Key words: Kolegala -Municipal –Council- by-election-MLA N. Mahesh –supporters-won