ಮೈಸೂರು,ಅಕ್ಟೋಬರ್,20.2020(www.justkannada.in) : ಸಾಂಸ್ಕೃತಿಕನಗರಿಯಲ್ಲಿ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಪರೀಕ್ಷೆ ನಡೆಸಲು ಪಾಲಿಕೆಯು ಮೊಬೈಲ್ ತಂಡಗಳ ರಚನೆ ಮಾಡಲು ಮುಂದಾಗಿದೆ.
ಮೊಬೈಲ್ ತಂಡಗಳನ್ನು ರಚನೆ
ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮೊಬೈಲ್ ತಂಡಗಳನ್ನು ರಚನೆ ಮಾಡಲಾಗಿದೆ.
ನಗರದ ವಿವಿಧ ಕೈಗಾರಿಕೆಗಳು, ವಾಣಿಜ್ಯೋದ್ಯಮಗಳು, ಶಾಲಾ-ಕಾಲೇಜು ಶಿಕ್ಷಣ ಸಂಸ್ಥೆಗಳು, ಸರ್ಕಾರಿ, ಸರ್ಕಾರೇತರ ಸಂಸ್ಥೆಗಳು ತಮ್ಮ ಸಿಬ್ಬಂದಿಗೆ ಕೊರೊನಾ ಪರೀಕ್ಷೆಯನ್ನು ಮಾಡಿಸಲು ನಗರ ಪಾಲಿಕೆಯ ಕಂಟ್ರೋಲ್ ರೂಮ್ 0821-2440890, ಮೊ.ಸಂ. 9449841196 ಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು.
ನಿಮ್ಮ ಸ್ಥಳಕ್ಕೆ ಭೇಟಿ ನೀಡಿ ಉಚಿತವಾಗಿ ಕೋವಿಡ್ ಪರೀಕ್ಷೆ
ಹೆಸರು ನೋಂದಾಯಿಸಿಕೊಂಡ ನಂತರ ಪಾಲಿಕೆಯ ಮೊಬೈಲ್ ತಂಡವು ನಿಮ್ಮ ಸ್ಥಳಕ್ಕೆ ಭೇಟಿ ನೀಡಿ ಉಚಿತವಾಗಿ ಕೋವಿಡ್ ಪರೀಕ್ಷೆಯನ್ನು ಮಾಡುವುದಾಗಿ ನಗರ ಪಾಲಿಕೆಯು ಪ್ರಕಟಣೆಯಲ್ಲಿ ತಿಳಿಸಿದೆ.
key words :Kovid-Testing-free-Polikai-Mobile-Team