ಬೆಂಗಳೂರು,ಜು,2,2020(www.justkannada.in): ಕೊರೋನಾ ಹಾವಳಿ, ಸರ್ಕಾರದ ಅನುಮತಿ ಸಿಗದ ಹಿನ್ನೆಲೆ ಹಲವು ದಿನಗಳಿಂದ ಮುಂದೂಡಿಕೆಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪದಗ್ರಹಣ ಸಮಾರಂಭ ಇಂದು ನೆರವೇರಿತು. ರಾಜ್ಯ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿದರು.
ಬೆಂಗಳೂರಿನ ನೂತನ ಕೆಪಿಸಿಸಿ ಕಚೇರಿ ಮುಂದೆ ನಡೆದ ಸಮಾರಂಭದಲ್ಲಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಾಂಗ್ರೆಸ್ ಬಾವುಟವನ್ನ ಡಿ.ಕೆ ಶಿವಕುಮಾರ್ ಗೆ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಈ ವೇಳೆ ವಿಪಕ್ಷ ನಾಯಕ ಸಿದ್ಧರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತಿತರರು ಉಪಸ್ಥಿತರಿದ್ದರು.
ಪ್ರತಿ ಜಿಲ್ಲೆ ಬ್ಲಾಕ್ ಮಟ್ಟದಲ್ಲಿ ಕಾರ್ಯಕ್ರಮ ವೀಕ್ಷಿಸಲು ಎಲ್ ಇಡಿ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಚೇರಿಯಲ್ಲಿ 150 ಗಣ್ಯರಿಗಷ್ಟೇ ಆಸನ ವ್ಯವಸ್ಥೆ ಮಾಡಲಾಗಿತ್ತು. ಡಿಕೆಶಿವಕುಮಾರ್ 10 ಲಕ್ಷ ಮಂದಿ ಏಕಕಾಲದಲ್ಲಿ ಡಿಕೆ ಶಿವಕುಮಾರ್ ಅವರ ಪಟ್ಟಾಭಿಷೇಕ ವೀಕ್ಷಣೆ ಮಾಡಿದ್ದಾರೆ. ರಾಜ್ಯದ 7.800 ಸ್ಥಳಗಳಲ್ಲಿ ಏಕಕಾಲಕ್ಕೆ ಡಿ.ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ಲೈವ್ ಆಗಿದೆ.
Key words: KPCC- DK Sivakumar -sworn -State -Congress -President