ಬೆಂಗಳೂರು,ಜ,20,2020(www.justkannada.in): ಕೆಪಿಸಿಸಿಗೆ ಶೀಘ್ರವೇ ನೂತನ ಅಧ್ಯಕ್ಷರನ್ನ ನೇಮಕ ಮಾಡಿ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿಗೆ ಮಾಜಿ ಡಿಸಿಎಂ ಡಾ. ಜಿ.ಪರಮೇಶ್ವರ್ ಇಮೇಲ್ ಮೂಲಕ ಮನವಿ ಮಾಡಿದ್ದಾರೆ.
ಈ ಸಂಬಂಧ ಸೋನಿಯಾ ಗಾಂಧಿ ಅವರಿಗೆ ಇಮೇಲ್ ಮೂಲಕ ಮನವಿ ಮಾಡಿರುವ ಡಾ.ಜಿ ಪರಮೇಶ್ವರ್, 2013ರ ಮಾದರಿಯಲ್ಲಿ ಕಾಂಗ್ರೆಸ್ ಪುನರುತ್ಹಾನ ಮಾಡಬೇಕು. ಹೀಗಾಗಿ ಸಾಮಾಜಿಕ ನ್ಯಾಯದ ಆಧಾರದ ಮೇಲೆ ಶೀಘ್ರವೇ ಕೆಪಿಸಿಸಿ ಅಧ್ಯಕ್ಷರನ್ನ ನೇಮಕ ಮಾಡಿ ಎಂದು ಕೋರಿದ್ದಾರೆ.
ಹಾಗೆಯೇ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಖರ್ಗೆ ಇದ್ದಾರೆ. ಬೆಳಗಾವಿ ಕರ್ನಾಟಕದ ಪ್ರತಿನಿಧಿಯಾಗಿ ಎಸ್ ಆರ್ ಪಾಟೀಲ್ ಇದ್ದಾರೆ. ಹಿಂದುಳಿದ ವರ್ಗ ಮತ್ತು ಮೈಸೂರು ಭಾಗದಲ್ಲಿ ಸಿದ್ಧರಾಮಯ್ಯ ಇದ್ದಾರೆ. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ್ರೆ ಬೆಂಗಳೂರು ಭಾಗದವರಾಗ್ತಾರೆ. ಕೆಪಿಸಿಸಿ ಕಾರ್ಯಧ್ಯಕ್ಷರಾಗಿ ಈಶ್ವರ್ ಖಂಡ್ರೆ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕದ ಬಗ್ಗೆ ಗೊಂದಲ ಬೇಡ. ಈಗ ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ ಅವಶ್ಯಕತೆ ಇಲ್ಲ. ಆದರೇ ಕೆಪಿಸಿಸಿ ಅಧ್ಯಕ್ಷರನ್ನ ನೇಮಕ ಮಾಡಿ. ಅದು ಜಾತಿ ಆಧಾರದ ಮೇಲೆ ಅಧ್ಯಕ್ಷರ ನೇಮಕ ಬೇಡ ಎಂದು ಪರಮೇಶ್ವರ್ ತಿಳಿಸಿದ್ದಾರೆ ಎನ್ನಲಾಗಿದೆ.
Key words: KPCC-president-aicc –Soniya Gandhi-former DCM-parameshwar