ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಚಿವ ಕೆ.ಎನ್ ರಾಜಣ್ಣ ಪರೋಕ್ಷ ಒತ್ತಾಯ?

ಬೆಂಗಳೂರು,ಜೂನ್,26,2024 (www.justkannada.in):  ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೆ ಇದೀಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದ್ದು ಈ ಬಗ್ಗೆ ಸಹಕಾರ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ.

ಈ  ಕುರಿತು ಮಾತನಾಡಿರುವ ಸಚಿವ ಕೆ.ಎನ್ ರಾಜಣ್ಣ,  ಲಿಂಗಾಯಿತ ನಾಯಕರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇಳುತ್ತಿರುವುದರಲ್ಲಿ ತಪ್ಪಿಲ್ಲ. ಎಲ್ಲಾ ಸಮುದಾಯದವರೂ ಕೆಪಿಸಿಸಿ ಅಧ್ಯಕ್ಷರಾಗಲು ಅರ್ಹರಿದ್ದಾರೆ ಸಿದ್ದರಾಮಯ್ಯ ಸಿಎಂ ಮಾಡುವಾಗ ಹೈಕಮಾಂಡ್  ಏನು ಹೇಳಿತ್ತು.  ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಎಂದು ಹೈಕಮಾಂಡ್ ಹೇಳಿತ್ತು.
ಡಿಕೆ ಶಿವಕುಮಾರ್ ಲೋಕಸಭೆ ಚುನಾವಣೆ ಮುಗಿಯುವರೆಗೆ ಅಧ್ಯಕ್ಷರಾಗಿರುತ್ತಾರೆ ಎಂದು ಹೈಕಮಾಂಡ್ ತಿಳಿಸಿತ್ತು. ಈಗ ಅದನ್ನ ನೆನಪು ಮಾಡಿಕೊಡಲು ಇಷ್ಟಪಡುತ್ತೇನೆ. ನನ್ನ ಅಭಿಪ್ರಾಯವನ್ನ ಹೇಳಿದ್ದೇನೆ ಎಂದು ಸಚಿವ ಕೆಎನ್ ರಾಜಣ್ಣ ತಿಳಿಸಿದ್ದಾರೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಚಿವ ಕೆ.ಎನ್ ರಾಜಣ್ಣ ಪರೋಕ್ಷ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ.

Key words: KPCC, President, change, Minister, KN Rajanna