ಬೆಂಗಳೂರು,ಮೇ 27,2019,2019(www.justkannada.in): ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಇಂದು ಭೇಟಿಯಾಗಿ ಪ್ರಸ್ತುತ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.
ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭೇಟಿಯಾಗಿ ಸುಮಾರು 1 ಗಂಟೆಗೆ ಹೆಚ್ಚು ಕಾಲ ಮಾತುಕತೆ ನಡೆಸಿದರು. ಭೇಟಿ ವೇಳೆ ಲೋಕಸಭೆಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ಫಲಿತಾಂಶದ ಪರಾಮರ್ಶೆ ಹಾಗೂ ಅತೃಪ್ತ ಶಾಸಕರ ಆಪರೇಷನ್ ಕಮಲ ವಿಚಾರ ಸೇರಿ ಹಲವು ವಿಚಾರಗಳ ಬಗ್ಗೆ ಪ್ರಸ್ತಾಪಿಸಿ ಚರ್ಚಿಸಿದ್ದಾರೆ ಎನ್ನಲಾಗಿದೆ.
ಹೆಚ್.ಡಿ ದೇವೇಗೌಡರ ಭೇಟಿ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ದಿನೇಶ್ ಗುಂಡೂರಾವ್, ಹೆಚ್.ಡಿ ದೇವೇಗೌಡರ ಜತೆ ಹಲವು ವಿಚಾರಗಳನ್ನ ಚರ್ಚಸಿದ್ದೇನೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಧಿಕೃತವಾದ ನಂತರ ಹೇಳ್ತೇನೆ ಎಂದರು. ಇನ್ನು ಬಿಜೆಪಿಯವರು ಸರ್ಕಾರಕ್ಕೆ ಡೆಡ್ ಲೈನ್ ನೀಡುತ್ತಿರುವ ವಿಚಾರನಾನು ಮಾತನಾಡಲ್ಲ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.
Key words: KPCC president Dinesh Gundurao, who met former Prime Minister HD Deve Gowda
#Bangalore #DineshGundurao #met #HDDeveGowda