ಸದನದಲ್ಲಿ ‘ಒನ್ ನೇಷನ್ ಒನ್ ಎಲೆಕ್ಷನ್’ ಚರ್ಚೆಗೆ ಡಿ.ಕೆ ಶಿವಕುಮಾರ್ ಆಕ್ರೋಶ

ಬೆಂಗಳೂರು,ಮಾರ್ಚ್,4,2021(www.justkannada.in): ಒಂದು ದೇಶ- ಒಂದು ಚುನಾವಣೆ’ ವಿಚಾರದ ಬಗ್ಗೆ ರಾಜ್ಯ ವಿಧಾನ ಮಂಡಲ ಕಲಾಪದಲ್ಲಿ ಚರ್ಚೆ ನಡೆಸುತ್ತಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.jk

ರಾಜ್ಯದಲ್ಲಿ ಜ್ವಲಂತ ಸಮಸ್ಯೆಗಳಿವೆ. ಆ ಸಮಸ್ಯೆಗಳ ಚರ್ಚೆಗೆ ಅವಕಾಶ ನೀಡದಿದ್ದರೇ ಸದನದ ಒಳಗಡೆ ಪ್ರತಿಭಟನೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದರು.

ಈ ಕುರಿತು ವಿಧಾನಸೌಧದಲ್ಲಿ ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, ರಾಜ್ಯದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಆದರೆ ಅವುಗಳನ್ನ ಬಿಟ್ಟು ಬೇರೆ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಒನ್ ನೇಷನ್ ಒನ್ ಎಲೆಕ್ಷನ್ ಎಂಬ ವಿಚಾರದ ಬಗ್ಗೆ ಚರ್ಚೆ ನಡಸಲಾಗುತ್ತಿದೆ. ಇದು ಯಾರ ಅಜೆಂಡಾ  ಅವರೇ ಹೇಳಬೇಕು ಅಷ್ಟೆ.  ಅವರನ್ನ ವೈಭವೀಕರಣ ಮಾಡಿಕೊಳ್ಳಲು ಚರ್ಚೆ ಅಷ್ಟೆ ಎಂದು ಲೇವಡಿ ಮಾಡಿದರು. KPCC president-DK Shivakumar- outrage - One Nation One election-discussion

ಹಾಗೆಯೇ ರಾಜ್ಯದ  ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡದಿದ್ದರೇ ಸದನದ ಒಳಗಡೆ ಪ್ರತಿಭಟನೆ ಮಾಡುತ್ತೇವೆ ಎಂದು ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದರು.

Key words: KPCC president-DK Shivakumar- outrage – One Nation One election-discussion