ಬೆಂಗಳೂರು,ಫೆಬ್ರವರಿ,18,2021(www.justkannada.in): ಎಡಗೈ ಸಮುದಾಯಕ್ಕೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡುವಂತೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲರಿಗೆ ಮಾಜಿ ಸಚಿವ ಹೆಚ್.ಆಂಜನೇಯ ಮನವಿ ಮಾಡಿದ್ದಾರೆ.
ಇಂದು ಬೆಂಗಳೂರಿನಲ್ಲಿ ರಣದೀಪ್ ಸಿಂಗ್ ಸುರ್ಜೇವಾಲರನ್ನ ಭೇಟಿಯಾಗಿ ಈ ಕುರಿತು ಪ್ರಸ್ತಾಪ ಸಲ್ಲಿಸಿದ ಮಾಜಿ ಸಚಿವ ಹೆಚ್, ಆಂಜನೇಯ, ರಾಜ್ಯದಲ್ಲಿ ಎಡಗೈ ಸಮುದಾಯದವರು 60 ಲಕ್ಷ ಮಂದಿ ಇದ್ದೇವೆ. ಎಲ್ಲಾ ಸಮುದಾಯಕ್ಕೂ ಅವಕಾಶ ನೀಡಿದ್ದೀರಿ. ಹೀಗಾಗಿ ನಮ್ಮ ಸಮುದಾಯಕ್ಕೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡಿ ಎಂದು ಮನವಿ ಮಾಡಿದರು.

Key words: KPCC –work-President as -Left Hand Community-former minister-y H. Anjaneya