ಬೆಂಗಳೂರು, ಡಿಸೆಂಬರ್ 19, 2019 (ww.justkannada.in): ಕೆಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ ಸಂಬಂಧ ಇಂದು ಬೆಳಗ್ಗೆ ಕೆಎಸ್ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ನ್ಯಾಯಾಲಯದ ಮೂಲಕ ಸರ್ಚ್ ವಾರೆಂಟ್ ಪಡೆದು ಅಧಿಕಾರಿಗಳು ದಾಳಿ ಮಾಡಿ ಶೋಧ ನಡೆಸಿದ್ದಾರೆ. ಕೆಪಿಎಲ್ ಫಿಕ್ಸಿಂಗ್ ಪ್ರಕರಣ ಸಂಬಂಧ ಈಗಾಗಲೇ ಸಿಸಿಬಿ ಹಲವು ಆಟಗಾರರು, ಕೋಚ್ಗಳು ಹಾಗೂ ತಂಡದ ಮಾಲೀಕರನ್ನ ಅರೆಸ್ಟ್ ಮಾಡಿ ವಿಚಾರಣೆ ನಡೆಸಿದೆ.
ನಿನ್ನೆ ಸಿಸಿಬಿ ಅಧಿಕಾರಿಗಳು ಬಳ್ಳಾರಿ ಟೀಂ ಮಾಲೀಕ ಅರವಿಂದ್ ರೆಡ್ಡಿಗೆ ಸಮನ್ಸ್ ನೀಡಿ, ಸುದೀರ್ಘ ವಿಚಾರಣೆ ನಡೆಸಿದ್ದಾರೆ.