KPSC EXAMS ಗೊಂದಲ : ನಾಳೆ ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ.

KPSC EXAMS confusion: Meeting of senior officers led by the Chief Secretary tomorrow. A meeting was held on January 18 under the chairmanship of Chief Secretary Shalini Rajneesh to discuss the confusions that have arisen regarding the recruitment to 384 posts of Gazetted Probationary.

 

ಬೆಂಗಳೂರು, ಜ.೧೭, ೨೦೧೫ : (www.justkannada.in news) ಗೆಜೆಟೆಡ್ ಪ್ರೋಬೇಷನರಿ 384 ಹುದ್ದೆಗಳಿಗೆ ನೇಮಕಾತಿ ಸಂಬಂಧ ಉದ್ಭವಿಸಿರುವ ಗೊಂದಲಗಳ ಬಗ್ಗೆ ಚರ್ಚಿಸಲು ಜ. ೧೮ ರಂದು  ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ನೇತೃತ್ವದಲ್ಲಿ ಸಭೆ.

ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಕಳೆದ ಡಿ. 29ರಂದು ನಡೆಸಿದ ಪೂರ್ವಭಾವಿ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆಗಳಲ್ಲಿ ಲೋಪದೋಷಗಳು ಕಂಡುಬಂದಿತ್ತು. ಈ ಬಗ್ಗೆ ಪರಿಶೀಲಿಸಿ, ಚರ್ಚಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದರು.

ಈ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳ ಹೆಚ್ಚುವರಿ ಮಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್. ಕೆಪಿಎಸ್‌ಸಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಡಿಪಿಎಆರ್ ಕಾರ್ಯದರ್ಶಿ, ಕನ್ನಡ ಮತ್ತು ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಮತ್ತು ನಿರ್ದೇಶಕರ ಜೊತೆ ಇದೇ 18ರಂದು ಸಭೆ ನಡೆಸಲು ಮುಖ್ಯ ಕಾರ್ಯದರ್ಶಿ ನಿರ್ಧರಿಸಿದ್ದಾರೆ.

ಹಿನ್ನೆಲೆ:

ಕೆಪಿಎಸ್ಸಿ  ನಡೆಸಿದ ಪರೀಕ್ಷೆಯಲ್ಲಿನ ಗೊಂದಲ, ಲೋಪದೋಷ ನಡೆದಿತ್ತು. ‘ಈ ಹುದ್ದೆಗಳ ನೇಮಕಾತಿಗೆ ಆಗಸ್ಟ್ 27ರಂದು ನಡೆದಿದ್ದ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆ ಪತ್ರಿಕೆ ಯಲ್ಲಿನ ಅನೇಕ ಲೋಪದೋಷಗಳ ಬಗೆಗೆ ವ್ಯಕ್ತವಾದ ವಿರೋಧ ಹಾಗೂ ಪರೀಕ್ಷಾರ್ಥಿಗಳ ಒತ್ತಾಯಕ್ಕೆ ಮಣಿದು ಆಯೋಗವು ಡಿಸೆಂಬರ್ 29ರಂದು  ಮರು ಪರೀಕ್ಷೆ ನಡೆಸಿತ್ತು.

ಆದರೆ, ನಡೆಸಿದ ಮರುಪರೀಕ್ಷೆಯ ಪಶ್ನೆ ಪತ್ರಿಕೆ ಗಳಲ್ಲೂ ಲೋಪ ದೋಷಗಳು ಮರುಕಳಿಸಿತ್ತು.  ಹೀಗಾಗಿ ಮತ್ತೆ ಪರೀಕ್ಷೆ ನಡೆಸುವಂತೆ ಆದೇಶ ನೀಡಬೇಕು ಎಂದು ಒತ್ತಾಯಿಸಿ ಸಾಹಿತಿ ಗೊ.ರು. ಚನ್ನಬಸಪ್ಪ, ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು.

ಇದೇ ವೇಳೆ ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಿದ್ದ ರಾಜ್ಯ ದಲಿತ ಪದವೀಧರರ ಸಂಘದ ಅಧ್ಯಕ್ಷ ವಿ. ಲೋಕೇಶ್, ಮರು ಪರೀಕ್ಷೆ ನಡೆಸಬೇಕು ಅಥವಾ ಪೂರ್ವಭಾವಿ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದರು.

ಈ ಗೊಂದಲಗಳ ಬೆನ್ನಲ್ಲೇ,  ಮುಖ್ಯಮಂತ್ರಿಯ ಹೆಚ್ಚುವರಿ ಮಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್. ಕೆಪಿಎಸ್‌ಸಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಡಿಪಿಎಆರ್ ಕಾರ್ಯದರ್ಶಿ, ಕನ್ನಡ ಮತ್ತು ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಮತ್ತು ನಿರ್ದೇಶಕರ ಜೊತೆ ಇದೇ 18ರಂದು ಸಭೆ ನಡೆಸಲು ಮುಖ್ಯ ಕಾರ್ಯದರ್ಶಿ ನಿರ್ಧರಿಸಿದ್ದಾರೆ.

key words: KPSC, EXAMS, Chief Secretary, Gazetted Probationary

SUMMARY: 

KPSC EXAMS confusion: Meeting of senior officers led by the Chief Secretary tomorrow.

A meeting was held on January 18 under the chairmanship of Chief Secretary Shalini Rajneesh to discuss the confusions that have arisen regarding the recruitment to 384 posts of Gazetted Probationary.