ಬೆಂಗಳೂರು,ನವೆಂಬರ್,7,2020(www.justkannada.in): ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ವೃಂದದ ಹುದ್ದೆಗಳ ನೇಮಕಾತಿಯ ಪರೀಕ್ಷಾ ವೇಳಾಪಟ್ಟಿಯನ್ನ ಪ್ರಕಟಿಸಲಾಗಿದೆ.
ಕೆಪಿಎಸ್ ಸಿಯು ಪರೀಕ್ಷೆಗಳನ್ನ ನಿಗದಿ ಮಾಡಿದ್ದು, 31-1-2020ರಂದು ಅಧಿಸೂಚನೆ ಹೊರಡಿಸಲಾಗಿದ್ದ ಕರ್ನಾಟಕ ರಾಜ್ಯಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ ಎ ವೃಂದದ ಸಹಾಯಕ ನಿಯಂತ್ರಕ ಹುದ್ದೆಗಳಿಗೆ ಡಿಸೆಂಬರ್ 21 ರಿಂದ ಡಿಸೆಂಬರ್ 24ರವರೆಗೆ ಪರೀಕ್ಷೆ ನಡೆಯಲಿದೆ.
ಹಾಗೆಯೇ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಮುಖ್ಯಪರೀಕ್ಷೆಗೆ 2021ರ ಜನವರಿ 2ರಿಂದ 5ರವರೆಗೆ ಪರೀಕ್ಷೆ ನಡೆಯಲಿದೆ.
ರಾಜ್ಯ ವಿವಿಧ ಇಲಾಖೆಗಳಲ್ಲಿನ ಮತ್ತು ಕರ್ನಾಟಕ ಭವನ, ದೆಹಲಿಯ ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ್ ಕರ್ನಾಟಕ ವೃಂದದ ಸಹಾಯಕರು/ ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ 31-1-2021 ರಂದು ಕಡ್ಡಾಯ ಕನ್ನಡ ಪರೀಕ್ಷೆ ಮತ್ತು 24-1-2021 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.
ಕರ್ನಾಟಕ ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿನ ಸಮೂಹ ‘ಎ’ ವೃಂದದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಹುದ್ದೆಗಳಿಗೆ(ಮುಖ್ಯಪರೀಕ್ಷೆ) 27-1-2021 ರಿಂದ 30-1-2021 ರವರೆಗೆ ಪರೀಕ್ಷೆ ನಡೆಯಲಿದೆ.
ರಾಜ್ಯ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ್ ಕರ್ನಾಟಕ ವೃಂದದ ಕಿರಿಯ ಸಹಾಯಕರು/ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ 13-2-2021 ರಂದು ಕಡ್ಡಾಯ ಕನ್ನಡ ಪರೀಕ್ಷೆ ಮತ್ತು 14-1-2021 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.
Key words: KPSC -schedule – recruitment – various posts-exam