ಮಂಡ್ಯ , ಡಿಸೆಂಬರ್ 12, 2019 (www.justkannada.in): ಕೆ.ಆರ್.ಪೇಟೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಖಾತೆ ತೆರೆದ ಶಾಸಕ ನಾರಾಯಣಗೌಡ ಸಣ್ಣ ನೀರಾವರಿ ಸಚಿವ ಸ್ಥಾನದ ಬೇಡಿಕೆ ಇಟ್ಟಿದ್ದಾರೆ.
ಕೆ.ಆರ್.ಪೇಟೆಯಲ್ಲಿ ಕೃಷಿಗೆ ನೀರಿನ ಸಮಸ್ಯೆ ಇದೆ. ಹೀಗಾಗಿ ಕೆ.ಆರ್. ಪೇಟೆ ಕ್ಷೇತ್ರದಲ್ಲಿ ಇರುವ ಒಣ ಭೂಮಿಗೆ ನೀರು ಹರಿಸಿ ನೀರಾವರಿ ಪ್ರದೇಶವನ್ನಾಗಿ ಮಾಡಬೇಕು ಎನ್ನುವುದು ನಾರಾಯಣಗೌಡರ ಉದ್ದೇಶವಾಗಿದೆ. ಹೀಗಾಗಿ ಸಣ್ಣ ನೀರಾವರಿ ಖಾತೆಗಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಬೇಡಿಕೆ ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನು ಉಪಚುನಾವಣೆಯಲ್ಲಿ ಭರ್ಜರಿ ಗೆಲುವಿನ ಬಳಿಕ ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ಕಸರತ್ತು ಶುರುವಾಗಿದ್ದು, ಗೆದ್ದ ಬಿಜೆಪಿ ಶಾಸಕರು ಸಚಿವ ಸ್ಥಾನದ ಬೇಡಿಕೆ ಜೊತೆ ಜೊತೆಗೆ ಬೇರೆ ಬೇಡಿಕೆಗಳಿಂದ ಸಿಎಂಗೆ ಹೊಸ ಟೆನ್ಷನ್ ಶುರುವಾಗಿದೆ.