ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಕಠಿಣ ಕ್ರಮ ಕೈಗೊಳ್ಳುತ್ತೇವೆ : ಕಂದಾಯ ಸಚಿವ ಕೃಷ್ಣಭೈರೇಗೌಡ

ಬೆಂಗಳೂರು,ಮಾರ್ಚ್,19,2025 (www.justkannada.in):  ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಗೋಮಾಳ, ಕೆರೆ ಸೇರಿದಂತೆ ಸರ್ಕಾರಿ ಭೂ ಒತ್ತುವರಿಯನ್ನು ತೆರವುಗೊಳಿಸಲಾಗುತ್ತಿದೆ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ನ ಶರವಣ ಅವರು ಬೆಂಗಳೂರು ನಗರದಲ್ಲಿ 3 ವರ್ಷಗಳಿಂದ ನೂರಾರು ಎಕರೆ ಸರ್ಕಾರಿ ಭೂಮಿ, ಗೋಮಾಳ ಒತ್ತುವರಿ ಆಗಿದೆ. ಈವರೆಗೂ ಸರ್ಕಾರ ಎಷ್ಟು ಎಕರೆ ಜಾಗ ಒತ್ತುವರಿ ತೆರವು ಮಾಡಿದೆ. ಗೋಮಾಳ ಜಾಗ ಒತ್ತುವರಿ ಆಗಿದೆ. ಅಧಿಕಾರಿಗಳೇ ಇದರಲ್ಲಿ ಶಾಮೀಲಾಗಿದ್ದಾರೆ‌. ಒತ್ತುವರಿ ತೆರವು ಮಾಡಲು‌ ಅಧಿಕಾರಿಗಳ ಒತ್ತಡ ಇದೆಯಾ? ಅಧಿಕಾರಿಗಳು ಅಕ್ರಮ ಮಾಡ್ತಿದ್ದಾರಾ?. ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಒತ್ತುವರಿ ತೆರವು ಮಾಡಬೇಕು ಎಂದು ಆಗ್ರಹಿಸಿದರು

ಇದಕ್ಕೆ ಉತ್ತರಿಸಿದ ಸಚಿವ ಕೃಷ್ಣಭೈರೇಗೌಡ, ಪ್ರತಿ ತಾಲ್ಲೂಕಿನಲ್ಲೂ ನಕಲಿ ದಾಖಲೆ ಸೃಷ್ಟಿಸಿ ಬೇರೊಬ್ಬರಿಗೆ ಸರ್ಕಾರಿ ಭೂಮಿ ಮಾರಾಟ ಮಾಡಲು ಅವಕಾಶವಿಲ್ಲದಂತೆ ನಿರ್ಬಂಧಿಸಲು ಸೂಕ್ತ ಕಾನೂನು ಜಾರಿಗೊಳಿಸಲಾಗುವುದು. ಸರ್ಕಾರಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರತಿ ತಾಲ್ಲೂಕಿನಲ್ಲೂ ವಾರಕ್ಕೆ ಎರಡು ಬಾರಿ ಕೈಗೊಳ್ಳಲು ಸೂಚಿಸಲಾಗಿದೆ. ಈಗಾಗಲೇ ಈ ಕಾರ್ಯ ಆರಂಭವಾಗಿದ್ದು, ಮತ್ತಷ್ಟು ಶೀಘ್ರಗೊಳಿಸಲಾಗುವುದು ಎಂದರು.

ಕಾನೂನು ಅಡಿಯಲ್ಲೇ ಕಾನೂನು ವಿರೋಧಿ ಕೆಲಸ ಕೆಲ ಅಧಿಕಾರಿಗಳು ಮಾಡ್ತಿದ್ದಾರೆ. ಕೆಲವು ಅಧಿಕಾರಿಗಳಿಂದಲೇ ಒತ್ತುವರಿ ತೆರವು ಆಗ್ತಿಲ್ಲ. ಅಧಿಕಾರಿಗಳು ಉದ್ದೇಶಪೂರ್ವಕವಾಗಿಯೇ ವ್ಯವಸ್ಥಿತವಾಗಿ ಇಂತಹ ಪ್ರಕರಣಗಳನ್ನ ನಡೆಸುತ್ತಿದ್ದಾರೆ. ಕಾನೂನು ಅಡಿಯಲ್ಲೇ ಕಾನೂನು ವಿರೋಧಿ ಕೆಲಸ ಕೆಲ ಅಧಿಕಾರಿಗಳು ಮಾಡ್ತಿದ್ದಾರೆ. ನನ್ನ ಕ್ಷೇತ್ರದಲ್ಲಿ ಇಂತಹ ಅಕ್ರಮ ನಡೆದಿದೆ. ಗೋಮಾಳ ಒತ್ತುವರಿ ಮಾಡಿಕೊಂಡಿದ್ದಾರೆ. ಪಂಚಾಯತಿಯವರೇ ಖಾತೆ ಮಾಡಿಕೊಟ್ಡಿದ್ದಾರೆ. ವ್ಯವಸ್ಥಿತವಾಗಿ ಅಕ್ರಮವಾಗಿ ಅಧಿಕಾರಿಗಳ ಬೆಂಬಲದಿಂದ ಒತ್ತುವರಿ ಮಾಡಿಕೊಂಡಿದ್ದಾರೆ. ನಾವು ಅಂತಹ ಕೇಸ್ ಟ್ಯಾಕಲ್ ಮಾಡಲು ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಅಂತ ತಿಳಿಸಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ಬಗ್ಗೆ 272 ದೂರುಗಳು ಬಂದಿವೆ. ಮಾರ್ಗಸೂಚಿ ಮತ್ತು ಮಾರುಕಟ್ಟೆ ಬೆಲೆಯಂತೆ ನಗರ ಜಿಲ್ಲೆಯ ವಿವಿಧ ಗ್ರಾಮಗಳ ಸರ್ಕಾರಿ ಜಮೀನಿಗೆ ಒಂದೊಂದು ಮೌಲ್ಯ ನಿಗದಿಪಡಿಸಲಾಗಿದೆ. ಒತ್ತುವರಿ ಮಾಡಿಕೊಂಡಿರುವವರಿಗೆ ನೋಟಿಸ್‌‍ ನೀಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿ ಹಂತ ಹಂತವಾಗಿ ತೆರವುಗೊಳಿಸಲಾಗುತ್ತದೆ ಎಂದರು.

Key words: strict action, clear encroachment, government land,Minister,  Krishna Bhairegowda