ಬೆಂಗಳೂರು,ಮಾ,6,2020(www.justkannada.in): ಕೃಷ್ಣಾ ಮೇಲ್ದಂಡೆ ಯೋಜನೆ ಕಾಮಗಾರಿಗೆ 10 ಸಾವಿರ ಕೋಟಿ ಅನುದಾನ ನಿಗದಿ ಮಾಡಿದ್ದೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ವಿಧಾನಸಭೆಯಲ್ಲಿ ಇಂದು ಈ ಬಗ್ಗೆ ಮಾತನಾಡಿದ ಸಿಎಂ ಬಿ.ಎಸ್ ಯಡಿಯೂರಪ್ಪ, ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಕಾಮಗಾರಿಗೆ 10 ಸಾವಿರ ಕೋಟಿ ಅನುದಾನ ನಿಗದಿ ಮಾಡಿದ್ದೇವೆ. ಆದರೆ ಇದನ್ನ ಬಜೆಟ್ ನಲ್ಲಿ ಪ್ರಸ್ತಾಪಿಸಿಲ್ಲ. ಪುನರ್ವಸತಿ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ. 30 ಹಳ್ಳಿಗಳಿಗೆ ಪುನರ್ವಸತಿ , ಪುನರ್ ನಿರ್ಮಾಣಕ್ಕೆ 10 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿತ್ತಿದೆ ಎಂದು ಮಾಹಿತಿ ನೀಡಿದರು.
ಮೂರು ವರ್ಷಗಳಲ್ಲಿ ಈ ಕಾಮಗಾರಿ ಮುಗಿಯಲಿದೆ. ಈ ಸಂಬಂಧ ಚರ್ಚಿಸಲು ಇಂದು ನಾನು ದೆಹಲಿಗೆ ತೆರಳುತ್ತಿದ್ದೇನೆ. ಕೇಂದ್ರ ಸರ್ಕಾರದ ಪ್ರಮುಖ ನಾಯಕರನ್ನ ಭೇಟಿಯಾಗಿ ಚರ್ಚಿಸುತ್ತೇನೆ. ಹೆಚ್ಚು ಅನುದಾನ ತರಲು ಯತ್ನಿಸುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಕಾಮಗಾರಿಗೆ 10 ಸಾವಿರ ಕೋಟಿ ಅನುದಾನ ನೀಡುತ್ತಿರುವುದು ಖುಷಿ ತಂದಿದೆ. ಆದರೆ ಈ ಯೋಜನೆಗೆ ಹಣ ಎಲ್ಲಿಂದ ತರುತ್ತೀರಿ. ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಹೀಗಾಗಿ ಹೇಗೆ ಹಣ ಒದಗಿಸುತ್ತೀರಿ ಎಂದು ಸಿದ್ಧರಾಮಯ್ಯ ಪ್ರಶ್ನಿಸಿದರು.
ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಅನುಮಾನ ಬೇಡ. ಯೋಜನೆಯನ್ನ ಕೈಗೆತ್ತಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.
Key words: Krishna meldande Project -3rd Stage- 10 thousand- crore- grant-CM BS Yeddyurappa