ಮೈಸೂರು,ಜೂನ್,30,2023(www.justkannada.in): ಜುಲೈ 2ರಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 18ನೇ ವಾರ್ಷಿಕ ಘಟಿಕೋತ್ಸವ ನಡೆಯಲಿದ್ದು ಅಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ ಎಂದು ಕುಲಪತಿ ಪ್ರೊ.ಶರಣಪ್ಪ ವಿ ಹಲಸೆ ಮಾಹಿತಿ ನೀಡಿದರು.
ಕರ್ನಾಟಕ ಮುಕ್ತ ವಿಶ್ವ ವಿದ್ಯಾನಿಲಯದ ಅತಿಥಿ ಗೃಹದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುಲಪತಿ ಪ್ರೊ.ಶರಣಪ್ಪ ವಿ ಹಲಸೆ, ಮೈಸೂರಿನ ಘಟಿಕೋತ್ಸವ ಭವನದಲ್ಲಿ ದಿನಾಂಕ 2-7-2023ರಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ 18ನೇ ವಾರ್ಷಿಕ ಘಟಿಕೋತ್ಸವ ನಡೆಯಲಿದೆ. ಈ ಬಾರಿ ಮೂವರಿಗೆ ಮುಕ್ತ ವಿಶ್ವ ವಿದ್ಯಾನಿಲಯ ವತಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮರಿಗೆ ಶಿಕ್ಷಣತಜ್ಞರಾದ ಎನ್.ರಾಮಚಂದ್ರಯ್ಯ, ವೆಂಕಟಲಕ್ಷ್ಮಿ ನರಸಿಂಹರಾಜುಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ ಎಂದರು.
ಈ ಬಾರಿ ಒಬ್ಬ ಮಹಿಳೆಗೆ ರಾಜ್ಯ ಶಾಸ್ತ್ರದಲ್ಲಿ ಪಿಎಚ್ ಡಿ ಪದವಿ ನೀಡಲಾಗಿದೆ. ಸ್ನಾತಕೋತ್ತರದಲ್ಲಿ 7057 ವಿದ್ಯಾರ್ಥಿಗಳು ತೇರ್ಗಡೆಯಾದರೇ ಸ್ನಾತಕ ಪದವಿಯಲ್ಲಿ 1664 ಪಾಸ್ ಆಗಿದ್ದಾರೆ ಎಂದು ತಿಳಿಸಿದರು.
-V.Mahesh kumar
Key words: KSOU- 18th Annual Convocation – June 2- President- Draupadi Murmu – honorary doctorates