ಮೈಸೂರು,ಜು,27,2020(www.justkannada.in):ಕೆಎಸ್ ಒಯುನ ಅಂತಿಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ಅಧಿಸೂಚನೆ ಹೊರಡಿಸಲಾಗಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2014-15ನೇ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕ ಕೋರ್ಸ್ ಗಳಾದ ಪ್ರಥಮ ವರ್ಷದ ಬಿ.ಎ/ಬಿ.ಕಾಂ., ಪದವಿಗಳಿಗೆ ಪ್ರವೇಶಾತಿ ಪಡೆದು ಪ್ರಸ್ತುತ ತೃತೀಯ/ಅಂತಿಮ ವರ್ಷದ ಬಿ.ಎ/ಬಿ.ಕಾಂ ವಿದ್ಯಾರ್ಥಿಗಳು ಹಾಗೂ 2019-20 ಶೈಕ್ಷಣಿಕ ಸಾಲಿನಲ್ಲಿ ಸ್ನಾತಕೋತ್ತರ ಕೋರ್ಸ್ ಗಳಾದ ಎಂ.ಎ/ಎಂ.ಸಿ.ಜೆ/ಎಂ.ಕಾಂ ಪ್ರವೇಶಾತಿ ಪಡೆದು ಅಂತಿಮ ವರ್ಷದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ಅಧಿಸೂಚನೆ ಹೊರಡಿಸಲಾಗಿದೆ.
ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ www.ksoumysuru.ac.in ನಲ್ಲಿ ಪರೀಕ್ಷಾ ಅರ್ಜಿ ಮತ್ತು ಪರೀಕ್ಷಾ ಶುಲ್ಕವನ್ನು ಕಡ್ಡಾಯವಾಗಿ ಅಂತರ್ಜಾಲದ ಮೂಲಕ ಮಾತ್ರ ಸಲ್ಲಿಸುವುದು.
ಪರೀಕ್ಷಾ ಶುಲ್ಕ ಪಾವತಿಸಲು ದಂಡ ಶುಲ್ಕವಿಲ್ಲದೆ 10/08/2020 ಹಾಗೂ 200ರೂ ದಂಡ ಶುಲ್ಕದೊಂದಿಗೆ 24/08/2020 ಕಡೆಯ ದಿನಾಂಕವಾಗಿರುತ್ತದೆ ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ್ ಆರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:- ಪ್ರಾದೇಶಿಕ ನಿರ್ದೇಶಕರು, ಕ.ರಾ.ಮು.ವಿ ಮಹಿಳಾ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, 4ನೇ ಮುಖ್ಯರಸ್ತೆ, 13ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-03. ಕಛೇರಿ ದೂರವಾಣಿ ಸಂಖ್ಯೆ:- 080 23448811, 9844506629. 9620395584, 7760848564
Key words: KSOU- final year –UG-PG- students- exam fees.