KSOU: ಅ.23 ರಂದು ಕೆ-ಸೆಟ್, ಯುಜಿಸಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ

ಮೈಸೂರು, ಅಕ್ಟೋಬರ್, 18, 2024 (www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ವು ಕೆ-ಸೆಟ್ ಮತ್ತು ಯುಜಿಸಿ- ನೆಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಡೆಸಿದ 50 ದಿನದ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಅಕ್ಟೋಬರ್ 23 ರಂಧು ನಡೆಯಲಿದೆ.

ಅ. 23 ರ ಬುಧವಾರ ಬೆಳಗ್ಗೆ 11 ಗಂಟೆಗೆ ಕರಾಮುವಿ ಆವರಣದಲ್ಲಿರುವ ಕಾವೇರಿ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಎಸ್. ಅಹಲ್ಯಾ ಅವರು ಪಾಲ್ಗೊಂಡು ತರಬೇತಿ ಶಿಬಿರಾರ್ಥಿಗಳಿಗೆ ಶುಭಹಾರೈಸುವರು.

ಕರ್ನಾಟಕ ಸರ್ಕಾರದ ಅಲ್ಪ ಸಂಖ್ಯಾತರ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಿರಿಯ ಐಎಎಸ್ ಅಧಿಕಾರಿ ಮನೋಜ್ ಜೈನ್ ಅವರು ಅಧ್ಯಯನ ಪುಸ್ತಕ ಬಿಡುಗಡೆ ಮಾಡಿ ಮುಖ್ಯ ಭಾಷಣ ಮಾಡುವರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅಧ್ಯಕ್ಷತೆ ವಹಿಸುವರು. ಕುಲಸಚಿವ ಪ್ರೊ. ಕೆ.ಬಿ. ಪ್ರವೀಣ ಉಪಸ್ಥಿತರಿರುವರು. ಕಳೆದ ಆಗಸ್ಟ್ 31 ರಂದು ಈ ತರಬೇತಿ ಪ್ರಾರಂಭವಾಗಿದ್ದು ಅಕ್ಟೋಬರ್ 23 ರಂದು ಮುಗಿಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ 295 ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ.

Key words: KSOU, K-SET, UGC, competitive exam, coaching class