ಬೆಂಗಳೂರು,ಮಾರ್ಚ್,15,2023(www.justkannada.in): ಯುಗಾದಿ ಹಬ್ಬಕ್ಕೆಂದು ನಗರಗಳಿಂದ ತಮ್ಮ ತಮ್ಮ ಊರುಗಳಿಗೆ ತೆರೆಳುವ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್ ಕಾದಿದ್ದು ಮಾರ್ಚ್ 21 ರಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಗಿಸಿ ಕೆಎಸ್ ಆರ್ ಟಿಸಿ ನೌಕರರು ಮುಷ್ಕರ ಹೂಡಿದ್ದಾರೆ.
ರಾಜ್ಯ ಸರ್ಕಾರ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡದ ಹಿನ್ನೆಲೆ ಹಾಗೂ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸದಿರುವುದಕ್ಕೆ ಮಾರ್ಚ್ 21 ರಿಂದು ಮುಷ್ಕರ ನಡೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನೌಕರರು ಮುಂದಾಗಿದ್ದಾರೆ.
ಈ ಕುರಿತು ಮಾತನಾಡಿರುವ ಸಾರಿಗೆ ನೌಕರರ ಸಂಘದ ಅಧ್ಯಕ್ಷ ಹೆಚ್.ವಿ. ಅನಂತ ಸುಬ್ಬರಾವ್, ವೇತನ ಪರಿಷ್ಕರಣೆ ಮಾಡುವಂತೆ ಆಗ್ರಹಿಸಿದ್ದವು. ಆದರೆ ಸರ್ಕಾರ ನೌಕರರ ಮನವಿಗೆ ಸ್ಪಂದಿಸುತ್ತಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಾರಿಗೆ ಸಚಿವ ಬಿ. ಶ್ರೀರಾಮುಲು ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಈ ಹಿಂದೆ ನಡೆದ ಹಲವು ಸಭೆಗಳಲ್ಲಿ ಹೇಳಿದ್ದರು. ಆದರೆ ಇನ್ನುವರೆಗೂ ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ. ಇತ್ತೀಚಿಗೆ ಸರ್ಕಾರಿ ನೌಕರರು, ವೇತನ ಹೆಚ್ಚಳ ಸಂಬಂಧ ಪ್ರತಿಭಟನೆ ಮಾಡಿದ ವೇಳೆ ಸಿಎಂ ಬೊಮ್ಮಾಯಿ ಶೇ 17 ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದರು. ಆದರೆ ನಾವು ಇಷ್ಟು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಗಮನ ಹರಿಸುತ್ತಿಲ್ಲ. ಹೀಗಾಗಿ ಮಾರ್ಚ್ 21 ರಂದು ಮುಷ್ಕರ ನಡೆಸಲಿದ್ದು ಅಂದು ಬೆಳಿಗ್ಗೆ 6 ಗಂಟೆಯಿಂದ ಬಸ್ ಸಂಚಾರ ಸ್ಥಗಿತಗೊಳಿಸುತ್ತೇವೆ. ಡಿಪೋದಿಂದ ಬಸ್ ಗಳನ್ನ ತೆಗೆಯುವುದಿಲ್ಲ ಎಂದು ತಿಳಿಸಿದ್ದಾರೆ.
Key words: KSRTC- employees- strike –march 21st