ಮೈಸೂರು,ಮಾ,5,2020(www.justkannada.in): ಇಂದು ಸಿಎಂ ಬಿಎಸ್ ಯಡಿಯೂರಪ್ಪ ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಕೃಷಿ ಕ್ಷೇತ್ರಕ್ಕೆ 32,259 ಕೋಟಿ ರೂಪಾಯಿಗಳನ್ನು ಮೀಸಲಾಗಿರುವುದು, ಏತ ನೀರಾವರಿ ಯೋಜನೆಗಳಿಗೆ 5,000 ಕೋಟಿ ಎತ್ತಿನಹೊಳೆ ಯೋಜನೆಗೆ 1500 ಕೋಟಿ, ಮಹಾದಾಯಿ ಯೋಜನೆಗೆ 500 ಕೋಟಿ ರೂಪಾಯಿ ಮೀಸಲಾಗಿರುವುದು ಸ್ವಾಗತಾರ್ಹ ಎಂದು ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಇಂದು ಮಾತನಾಡಿದ ಕುರುಬೂರು ಶಾಂತಕುಮಾರ್, ಕೃಷಿ ಉಪಕರಣಗಳ ಸಾಲದ ಮೇಲಿನ ಸುಸ್ತಿ ಬಡ್ಡಿ ಮನ್ನಾ ಮಾಡಿರುವುದು ಒಳ್ಳೆಯ ಬೆಳವಣಿಗೆ, ಕೃಷಿ ಕ್ಷೇತ್ರಕ್ಕೆ ಮೀಸಲಿಟ್ಟಿರುವ ಹಣದಯೋಜನೆಗಳು ಜಾರಿಯಾದಾಗ ಮಾತ್ರ ಸಾರ್ಥಕವಾಗುತ್ತದೆ. ಇಲ್ಲದಿದ್ದರೆ ಹುಸಿ ಬಜೆಟ್ ಆಗುತ್ತದೆ, ಕೃಷಿ ಉತ್ಪನ್ನಗಳ ಬೆಲೆ ಕುಸಿದಾಗ ಸರ್ಕಾರ ಖರೀದಿ ಮಾಡುವ ಯೋಜನೆ ಬಗ್ಗೆ ಅಥವಾ ಶಾಸನಬದ್ಧ ಬೆಂಬಲ ಬೆಲೆ ನಿಗದಿ ಮಾಡುವ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ , ಸಾಲಮನ್ನಾ ಗೊಂದಲದ ನಿವಾರಣೆ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲಇದು ತುಂಬಾ ಬೇಸರದ ಸಂಗತಿ ಎಂದು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
Key words: Kurubur Shantakumar -commented –cm bs yeddyurappa- state budget.