ಬೆಂಗಳೂರು,ನವೆಂಬರ್,18,2022(www.justkannada.in): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ರಾಜ್ಯದ ಪತ್ರಕರ್ತರಿಂದ ವರದಿ,ಲೇಖನ, ಸುದ್ದಿ ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಶಸ್ತಿಗಳ ಮಾಹಿತಿ ಈ ಕೆಳಕಂಡಂತಿದೆ.
- ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿಗೆ)
- ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿಗೆ)
- ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ಅಪರಾಧ ವರದಿಗೆ)
- ಬಿ. ಎಸ್. ವೆಂಕಟರಾಂ ಪ್ರಶಸ್ತಿ (ಅತ್ಯುತ್ತಮ ಸ್ಕೂಪ್ ವರದಿಗೆ)
- ಕೆ. ಎ. ನೆಟ್ಟಕಲಪ್ಪ ಪ್ರಶಸ್ತಿ (ಅತ್ಯುತ್ತಮ ಕ್ರೀಡಾ ವರದಿಗೆ) 6. ಖಾದ್ರಿ ಶಾಮಣ್ಣ ಪ್ರಶಸ್ತಿ (ಅತ್ಯುತ್ತಮ ವಿಮರ್ಶಾತ್ಮಕ ಲೇಖನಕ್ಕೆ)
- ಮಂಗಳ ಎಂ. ಸಿ. ವರ್ಗಿಸ್ ಪ್ರಶಸ್ತಿ (ವಾರ ಪತ್ರಿಕೆಯಲ್ಲಿ ಪ್ರಕಟವಾದ ಚಿತ್ರ ಲೇಖನಕ್ಕೆ)
- ಬಂಡಾಪುರ ಮುನಿರಾಜು ಸ್ಮಾರಕ ಪ್ರಶಸ್ತಿ (ಅತ್ಯುತ್ತಮ ಸುದ್ದಿ ಛಾಯಾಚಿತ್ರಕ್ಕೆ)
9.ಆರ್.ಎಲ್.ವಾಸುದೇವರಾವ್ ಪ್ರಶಸ್ತಿ (ಅರಣ್ಯ ಕುರಿತ ಅತ್ಯುತ್ತಮ ಲೇಖನಕ್ಕೆ)
- ಆರ್.ಎಲ್. ವಾಸುದೇವರಾವ್ ಪ್ರಶಸ್ತಿ (ವನ್ಯ ಪ್ರಾಣಿಗಳ ಕುರಿತ ಅತ್ಯುತ್ತಮ ಲೇಖನಕ್ಕೆ)
- ಬಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿ (ಆರ್ಥಿಕ ದುರ್ಬಲ ವರ್ಗದವರ ಕುರಿತ ಅತ್ಯುತ್ತಮ ವರದಿಗೆ)
- ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ (ಗ್ರಾಮೀಣ ಜನ-ಜೀವನದ ಅತ್ಯುತ್ತಮ ವರದಿಗೆ)
- ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ (ಬೆಂಗಳೂರು ಮತ್ತು ಗ್ರಾಮಾಂತರ ಜಿಲ್ಲೆ ಅಭಿವೃದ್ಧಿ ಕುರಿತ ಅತ್ಯುತ್ತಮ ವರದಿಗೆ )
- ಯಜಮಾನ್ ಟಿ. ನಾರಾಯಣಪ್ಪ ಸ್ಮಾರಕ ಪ್ರಶಸ್ತಿ (ಜಿಲ್ಲಾ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಅತ್ಯುತ್ತಮ ಕೃಷಿ ವರದಿ)
- ಹಾಸ್ಯ ಚಕ್ರವರ್ತಿ ನಾಡಿಗ ಕೃಷ್ಣರಾಯರ ಪ್ರಶಸ್ತಿ (ಅತ್ಯುತ್ತಮ ವಿಡಂಬನಾತ್ಮಕ ಲೇಖನಕ್ಕೆ)
- ಅತ್ಯುತ್ತಮ ಪುಟ ವಿನ್ಯಾಸಗಾರರಿಗೆ (ಡೆಸ್ಕ್ ನಲ್ಲಿ ಕೆಲಸ ಮಾಡುವವರು)
- ನ್ಯಾಯಾಲಯದ (ಕೋರ್ಟ್ ಬೀಟ್) ಅತ್ಯುತ್ತಮ ವರದಿಗಾಗಿ,
- ಸಣ್ಣುವಂಡ ಶ್ರೀನಿವಾಸ್ ಚಂಗಪ್ಪ (ಅತ್ಯುತ್ತಮ ಸೇನಾ ವರದಿ ಪ್ರಶಸ್ತಿ )
ವಿದ್ಯುನ್ಮಾನ (ಟಿವಿ)ವಿಭಾಗ
- ಅತ್ಯುತ್ತಮ ರಾಜಕೀಯ ವಿಶ್ಲೇಷಣೆ
- ಅತ್ಯುತ್ತಮ ತನಿಖಾ ವರದಿಗಾಗಿ
- ಅತ್ಯುತ್ತಮ ಸಾಮಾಜಿಕ ಕಳಕಳಿ ಕುರಿತ ಮಾನವೀಯ ವರದಿ
ಷರತ್ತುಗಳು :
- ಪ್ರಶಸ್ತಿಗೆ 2020 ಜನವರಿ 1 ರಿಂದ 2020 ಡಿಸೆಂಬರ್ 31 ರೊಳಗೆ ದಿನಪತ್ರಿಕೆ ಮತ್ತು ನಿಯತಕಾಲಿಕೆಗಳಲ್ಲಿ ಪ್ರಕಟವಾದ ಲೇಖನ,ವರದಿ, ವಿಶೇಷ ವರದಿ ಸುದ್ದಿ ಛಾಯಾ ಚಿತ್ರಗಳನ್ನು ಕಳುಹಿಸಬೇಕು.
- ವರದಿ/ಲೇಖನ ಯಾವ ಪ್ರಶಸ್ತಿಗೆ ಎಂಬುದನ್ನು ಲೇಖನದ ಮುಖಪುಟದಲ್ಲಿ ಸ್ವಷ್ಟವಾಗಿ ಬರೆದಿರಬೇಕು.
- ಅನುವಾದ ಮಾಡಿದ ವರದಿ,ಲೇಖನಗಳಿಗೆ ಅವಕಾಶವಿಲ್ಲ
- ರಾಜ್ಯ ಸಂಘದ ಪದಾಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಸಂಘದ ಪದಾಧಿಕಾರಿಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.
- ಲೇಖನ ವರದಿಗಳನ್ನು ಮೂರು ಪ್ರತಿಗಳಲ್ಲಿ (ಜೆರಾಕ್ಸ್ ಪ್ರತಿಗಳಾದರೆ ದೃಢೀಕೃತವಾದ ಒಂದು ಮೂಲ ಪ್ರತಿ ಇರಬೇಕು.) ಕಳುಹಿಸಬೇಕು.
- ವಿದ್ಯುನ್ಮಾನ ಮಾಧ್ಯಮದ ಪ್ರಶಸ್ತಿಗಳ ಪ್ರವೇಶಕ್ಕೆ ವರದಿ ಪ್ರಸಾರವಾದ ಕ್ಲಿಪಿಂಗ್ (ಸಿಡಿ ಅಥವಾ ಪೆನ್ಡ್ರೈವ್) ಮತ್ತು ಅದರ ಸ್ಕ್ರಿಪ್ಗಳನ್ನು ಸಂಪಾದಕರ ದೃಢೀಕರಣ ಸಹಿತ ಕಳುಹಿಸಬೇಕು.
- ಅರ್ಜಿ ಸಲ್ಲಿಸುವವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವದ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಯನ್ನು ಲಗತ್ತಿಸಬೇಕು.
- ಲೇಖನದ ಜೊತೆಯಲ್ಲಿ ಸ್ವ ಪರಿಚಯ ಮತ್ತು ಪಾಸ್ ಪೋರ್ಟ್ ಸೈಜ್ ಭಾವಚಿತ್ರ ಕಳುಹಿಸಬೇಕು.
- ಈಗಾಗಲೇ ಒಂದು ಬಾರಿ ಪ್ರಶಸ್ತಿಯನ್ನು ಪಡೆದವರು, ಮತ್ತೆ ಅದೇ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಅರ್ಜಿಗಳನ್ನು ಕಳುಹಿಸಿಕೊಡಬೇಕಾದ ವಿಳಾಸ
ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ರಿ) ಕಂದಾಯ ಭವನ,
3ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು-560009 ಈ ವಿಳಾಸಕ್ಕೆ 28-11-2022ರೊಳಗಾಗಿ ಒಳಗೆ ತಲುಪುವಂತೆ ಕಳುಹಿಸಬೇಕು. ನಂತರ ಬಂದವುಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ರಾಜ್ಯ ಅದ್ಯಕ್ಷರಾದ ಶಿವಾನಂದ ತಗಡೂರ ಹಾಗೂ ಪ್ರದಾನ ಕಾರ್ಯದರ್ಶಿ ಜೆ.ಸಿ.ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ನೋಂ) 3ನೇ ಮಹಡಿ, ಕಂದಾಯ ಭವನ, ಕೆಂಪೇಗೌಡ ರಸ್ತೆ, ಬೆಂಗಳೂರು-560009. ದೂರವಾಣಿ : 22212192
Key words: KUWJ -Annual Awards- Call -Applications.