ಕಲ್ಬುರ್ಗಿ,ಜ,8,2020(www.justkannada.in): ಕೇಂದ್ರದ ಕಾರ್ಮಿಕ ನೀತಿ ವಿರೋಧಿಸಿ ಇಂದು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ದೊರೆತಿದೆ. ಮೈಸೂರು ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಬಸ್ ಸಂಚಾರ ಮೆಡಿಕಲ್ ಆಸ್ಪತ್ರೆ ಅಂಗಡಿ ಮುಂಗಟ್ಟುಗಳು ಓಪನ್ ಆಗಿದೆ.
ಈ ನಡುವೆ ಹಾಸನದಲ್ಲಿ ಬಂದ್ ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಬಸ್ ಸಂಚಾರವಿದ್ದು ಶಾಲಾಕಾಲೇಜುಗಳು ತೆರೆದಿದೆ. ಆದರೆ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಕಲ್ಬುರ್ಗಿಯಲ್ಲಿ ಬಸ್ ತಡೆದು ಪ್ರತಿಭಟನೆಗೆ ಮುಂದಾದ ಘಟನೆ ನಡೆದಿದ್ದು ಕಲ್ಬುರ್ಗಿಯಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಿದೆ. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಸಂಚಾರ ಸ್ಥಗಿತಗೊಳಿಸಿದೆ.
ಇನ್ನು ಹುಬ್ಬಳ್ಳಿಯ ಎಪಿಎಂಸಿ ಮಾರುಕಟ್ಟೆಗೆ ಬಂದ್ ಬಿಸಿ ತಟ್ಟಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಕೊಳ್ಳಲು ಜನರು ಆಗಮಿಸುತ್ತಿಲ್ಲ. ಹೀಗಾಗಿ ಎಪಿಎಂಸಿ ಮಾರುಕಟ್ಟೆ ಜನರಿಲ್ಲದೆ ಬಿಕೋ ಎನ್ನುತ್ತಿದೆ. ಇನ್ನು ರಾಯಚೂರಿನ ದೇವದುರ್ಗದ ಜಾಲಹಳ್ಳಿಪಟ್ಟಣದಲ್ಲಿ ಬಂದ್ ಮಾಡಲಾಗಿದ್ದು ಅಂಗಡಿ ಮುಂಗಟ್ಟುಗಳು ಸ್ವಯಂಪ್ರೇರಿತವಾಗಿ ಮುಚ್ಚಿವೆ.
ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಮೆಜೆಸ್ಟಿಕ್ ನಲ್ಲಿ ಬಸ್ ಸಂಚಾರ ಎಂದಿನಂತೆ ಇದ್ದು ಪ್ರಯಾಣಿಕರ ಪ್ರಮಾಣ ಕಡಿಮೆ ಇದೆ. ಮೆಟ್ರೋ ನಿಲ್ದಾಣದಲ್ಲೂ ಸಹ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿದೆ.
Key words: labor-strike-Mixed reaction- Hassan-Bus -stops – Kalburgi