ಕಲ್ಬುರ್ಗಿ,ಅಕ್ಟೋಬರ್,3,2023(www.justkannada.in): ರಾಜ್ಯದೆಲ್ಲೆಡೆ ಮಳೆ ಕೊರತೆಯಾಗಿದೆ. ಅಕ್ಟೋಬರ್10 ರಂದು ಕೇಂದ್ರ ತಂಡ ರಾಜ್ಯಕ್ಕೆ ಭೇಟಿ ನೀಡಲಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ, ರಾಜ್ಯದಲ್ಲಿ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದೇವೆ. ಅಕ್ಟೋಬರ್ 10ರಂದು ಕೇಂದ್ರ ಅಧಿಕಾರಿಗಳ ತಂಡ ರಾಜ್ಯಕ್ಕೆ ಭೇಟಿ ನೀಡುತ್ತದೆ. ಅಧಿಕಾರಿಗಳ 3 ತಂಡ ರಾಜ್ಯಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಲಿದ್ದಾರೆ. ಬೆಳೆ ಸರ್ವೆ ನಡೆಸಲು ನಮ್ಮ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅ.10ರೊಳಗೆ ಸರ್ವೆ ಕಾರ್ಯ ಮುಗಿಸಲು ಕಟ್ಟುನಿಟ್ಟಾಗಿ ಸೂಚನೆ ನೀಡಲಾಗಿದೆ. ರೈತರ ಆತ್ಮಹತ್ಯೆ ಪ್ರಕರಣ ತಡೆಗಟ್ಟಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಆರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ ಎಂಬ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಚಲುವರಾಯಸ್ವಾಮಿ, ಹೆಚ್.ಡಿ ಕುಮಾರಸ್ವಾಮಿ, ಸಿಪಿ ಯೋಗೇಶ್ವರ್ ಕಾಂಗ್ರೆಸ್ ಹಣೆಬರಹ ಬರೆಯಲು ಸಾಧ್ಯವಿಲ್ಲ ಮಗನ ಹಿಂಸೆಯಿಂದ ದೇವೇಗೌಡರು ಮೈತ್ರಿಗೆ ಒಪ್ಪಿದ್ದಾರೆ. ಬಿಜೆಪಿಗೆ ಜೆಡಿಎಸ್, ಜೆಡಿಎಸ್ ಗೆ ಬಿಜೆಪಿ ಅವಶ್ಯಕತೆ ಇದೆ ಇಬ್ಬರು ಮುಳುಗಿ ಹೋಗೊ ಭಯದಲ್ಲಿದ್ದಾರೆ ಎಂದು ಟಾಂಗ್ ನೀಡಿದರು.
Key words: Lack of rain – Central team – visit – state – 10th – Minister -Chaluvarayaswamy.