ದೆಹಲಿಯ ಗಣರಾಜ್ಯೋತ್ಸವ- 2025: “ಲಕ್ಕುಂಡಿ ಸ್ತಬ್ಧಚಿತ್ರ” ಕ್ಕೆ ಓಟ್ ಮಾಡಿ : ಹೇಮಂತ್ ನಿಂಬಾಳ್ಕರ್ ಮನವಿ

Delhi's Republic Day 2025: Hemant Nimbalkar urges people to vote for 'Lakkundi tableau'

ನವದೆಹಲಿ, ಜ. 27 : ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್ಲೈನ್ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ.

ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿತ್ತು. ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರು ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್ ಲೈನ್, ಇಮೇಲ್ ಮತ್ತು ಎಸ್ಎಂಎಸ್ ಮೂಲಕ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಜನವರಿ 28ರ ಮಧ್ಯರಾತ್ರಿ 12ರ ವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗದಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಓಟ್ ಮಾಡುವ ವಿಧಾನದ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಚಿತ್ರವನ್ನು ಸಹ ಬಿಡುಗಡೆಗೊಳಿಸಿದೆ. ಇದನ್ನು ಅನುಸರಿಸಿ, Lakkundi Cradle of stone Craft ವಿಷಯದ ಸ್ತಬ್ಧಚಿತ್ರಕ್ಕೆ ಹೆಚ್ಚು ಹೆಚ್ಚು ಓಟ್ ಮಾಡುವ ಮೂಲಕ  ಬೆಂಬಲ ಹಾಗೂ ಮೆಚ್ಚುಗೆ ಸೂಚಿಸಬೇಕೆಂದೂ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

https://www.mygov.in/group-poll/vote-your-favourite-tableau-and-marching-contingent-republic-day-parade-2025/ ಕೊಂಡಿಯನ್ನು ಕ್ಲಿಕ್ ಮಾಡಿ, Login to participate  ಮೇಲೆ ಕ್ಲಿಕ್ ಮಾಡಿ, ತಮ್ಮ ನೋಂದಾಯಿತ ಮೊಬೈಲ್ ನಂಬರ್ ಅಥವಾ ಇಮೇಲ್ ವಿವರ ನಮೂದಿಸಿ, ತಾವು ಸ್ವೀಕರಿಸುವ ಒಟಿಪಿ ನಮೂದಿಸಿ, ನಂತರ Resend. OTP/ Submitted ಇದರಲ್ಲಿ  submitt ಕ್ಲಿಕ್ ಮಾಡಿ, ಎಲ್ಲಾ ಸ್ತಬ್ಧಚಿತ್ರಗಳ ಮಾಹಿತಿ ಕಾಣುತ್ತದೆ.Lakkundi : cradle of stone craft ಕ್ಲಿಕ್ ಮಾಡಿ ತಮ್ಮ ಮತವನ್ನು ದಾಖಲಿಸಬಹುದು.

ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ MYGOVPOLL 357037,12 ಟೈಫ್ ಮಾಡಿ 7738299899 ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಓಟ್ ಮಾಡಬಹುದಾಗಿದೆ.

key words: Republic Day 2025, Hemant Nimbalkar, vote for ‘Lakkundi tableau’

SUMMARY:

Delhi’s Republic Day 2025: Hemant Nimbalkar urges people to vote for ‘Lakkundi tableau’