ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

ಬೆಳಗಾವಿ, ಜನವರಿ 14,2025 (www.justkannada.in): ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಮತ್ತು ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಬೆಳಿಗ್ಗೆ 5 ವೇಳೆಗೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ  ಈ ಘಟನೆ ನಡೆದಿದೆ. ಕಾರು ಮರಕ್ಕೆ ಗುದ್ದಿದ್ದು, ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎನ್ನುವ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ.

ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಚಿವೆ ಲಕ್ಷ್ಮೀ  ಹೆಬ್ಬಾಳ್ಕರ್ ಅವರನ್ನು ಕೂಡಲೇ ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಹೋದರ ಚನ್ನರಾಜ ಹಟ್ಟಿಹೊಳಿ ಅವರು ಬೆಂಗಳೂರಿನಿಂದ ಬೆಳಗಾವಿಗೆ ಕಾರಿನಲ್ಲಿ ಹೋಗುತ್ತಿದ್ದ ವೇಳೆ ದಾರಿಯಲ್ಲಿ ಕಾರಿಗೆ ನಾಯಿಯೊಂದು ಅಡ್ಡ ಬಂದಿದೆ. ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿಯಲ್ಲಿದ್ದ ಮರಕ್ಕೆ  ಕಾರು ಡಿಕ್ಕಿ ಹೊಡೆದಿದೆ.

Key words: Minister, Lakshmi Hebbalkar, car, accident